ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕಕ್ಕೆ ಶನಿವಾರ ವಿಧಾನಸಭೆ ಅಂಗೀಕರಿಸಿದೆ. ಕಾಂಗ್ರೆಸ್ ವಿರೋಧದ ಮಧ್ಯೆಯೇ ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಕೆಲ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ. ವಿಧೇಯಕದ ಪ್ರಮುಖಾಂಶಗಳು:
- ವಿಧೇಯಕದ ಪ್ರಕಾರ ಇನ್ಮುಂದೆ ಯಾರು ಬೇಕಾದರೂ ಕೃಷಿ ಜಮೀನು ಖರೀದಿ ಮಾಡಬಹುದು.
- ನೀರಾವರಿ ಪ್ರದೇಶದಲ್ಲಿ ಖರೀದಿ ಮಾಡುವ ಜಮೀನು ಕೃಷಿಗೆ ಮಾತ್ರ ಬಳಕೆಯಾಗಬೇಕು.
- 5 ಜನರಿರುವ ಒಂದು ಕುಟುಂಬ ಗರಿಷ್ಠ 54 ಏಕರೆ ಕೃಷಿ ಜಮೀನು ಖರೀದಿಗೆ ಅವಕಾಶ.
- 5 ಕ್ಕಿಂತ ಹೆಚ್ಚು ಇರುವ ಕುಟುಂಬ ಗರಿಷ್ಠ 108 ಎಕರೆ ಜಮೀನು ಖರೀದಿ ಮಾಡಬಹುದು.
- ಕೃಷಿ ಜಮೀನು ಖರೀದಿಸಲು ಈ ಹಿಂದೆ ಇದ್ದ 25 ಲಕ್ಷ ರೂ ವಾರ್ಷಿಕ ಆದಾಯ ಮಿತಿ ರದ್ದು.
from India & World News in Kannada | VK Polls https://ift.tt/33ZXoct