ಬೆಳಗಾವಿಯಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಬರ್ಬರ ಹತ್ಯೆ

ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದ ಹೊರವಲಯದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮಚ್ಛೆ ಗ್ರಾಮದ ಲಕ್ಷ್ಮೀ ನಗರದ ರಾಜಶ್ರೀ ರವಿ ಬನ್ನೂರ್‌ (21) ಹಾಗೂ ರೋಹಿಣಿ ಗಂಗಪ್ಪ ಹುಲಮನಿ (22) ಕೊಲೆಯಾದ ಮಹಿಳೆಯರು. ಶನಿವಾರ ಸಂಜೆ ಇವರು ವಾಯು ವಿಹಾರಕ್ಕೆ ಹೊರಟಿದ್ದ ವೇಳೆ ಬೈಕ್‌ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಚೂರಿಯಿಂದ ಇರಿದು, ಕತ್ತು ಕೊಯ್ದು ಮಾಡಿದ್ದಾರೆ. ಕೊಲೆಯಾದವರ ಪೈಕಿ ರಾಜಶ್ರೀ ಬನ್ನೂರ ಐದು ತಿಂಗಳ ಗರ್ಭಿಣಿಯಾಗಿದ್ದರು. ಇವರು ಮೂಲತಃ ಶಿಂಧೊಳ್ಳಿಯವರಾಗಿದ್ದು, ಸುಳಗಾ ಗ್ರಾಮದ ರೋಹಿಣಿ ಹುಲಮನಿ ಜತೆಗೂಡಿ ಮಚ್ಛೆಯ ಒಂದೇ ಮನೆಯಲ್ಲಿ ವಾಸವಿದ್ದರು. ಇವರಿಬ್ಬರ ಪತಿಯಂದಿರು ಉದ್ಯಮಬಾಗ ಕೈಗಾರಿಕಾ ಪ್ರದೇಶದಲ್ಲಿ ಕೂಲಿ ಕೆಲಸದಲ್ಲಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಘಟನಾ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. 'ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರ ಬಂಧನಕ್ಕೆ ತಂಡ ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ' ಎಂದು ಗ್ರಾಮೀಣ ಠಾಣೆ ಪಿಐ ಸರವಗೋಳ ತಿಳಿಸಿದ್ದಾರೆ. ಇಬ್ಬರು ಮಹಿಳೆಯರ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಡಾ.ಕೆ.ತ್ಯಾಗರಾಜನ್‌ ತಿಳಿಸಿದ್ದಾರೆ.


from India & World News in Kannada | VK Polls https://ift.tt/334hjb2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...