ರಾಜ್ಯದಲ್ಲಿಂದು ಹೆಚ್ಚಿದ ಬಂದ್‌ ಕಾವು: ಕೇಂದ್ರ, ರಾಜ್ಯದ ಕೃಷಿ ನೀತಿ ವಿರೋಧಿಸಿ ಪ್ರತಿಭಟನೆ!

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಕೃಷಿ ಕಾಯಿದೆಗಳು ವಿರೋಧಿ ಎಂದು ಆಪಾದಿಸಿ ರೈತಪರ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಜನಜೀವನದ ಮೇಲೆ ಪರಿಣಾಮ ಭೀರುತ್ತಿದೆ. ಬೆಂಗಳೂರು ಸಂಪೂರ್ಣ ಲಾಕ್ ಆಗಿದ್ದು, ನಗರದ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬಂದ್‌ಗೆ ಹಲವು ರೈತ ಪರ ಸಂಘಟನೆಗಳ ಜತೆಗೆ ಕರ್ನಾಟಕ ನವನಿರ್ಮಾಣ ಸೇನೆ, ದಲಿತ ಪರ ಸಂಘಟನೆಗಳು, ಜನವಾದಿ ಮಹಿಳಾ ಸಂಘಟನೆ, ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕ ಸಂಘಟನೆ , ಓಲಾ-ಉಬರ್‌, ಬೀದಿ ಬದಿ ವ್ಯಾಪಾರಿಗಳು, ತರಕಾರಿ ಮತ್ತು ಹಣ್ಣು ಸಗಟು ವರ್ತಕರ ಸಂಘ, ಲಾರಿ ಮಾಲೀಕರ ಸಂಘ, ಕರ್ನಾಟಕ ಅಣ್ಣಾ ಡಿಎಂಕೆ ಪಕ್ಷ, ಕನ್ನಡ ಸಂಘರ್ಷ ಸಮಿತಿ .ಕನ್ನಡಪರ ಸಂಘಟನೆಗಳು, ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್‌ ಸೇರಿದಂತೆ ಹಲವು ಸಂಘಟನೆಗಳು ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡಿವೆ. ಬೆಂಗಳೂರು ಕಂಪ್ಲೀಟ್ ಲಾಕ್ ರೈತರ ಪ್ರತಿಭಟನೆಯಿಂದ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ. ಬೆಂಗಳೂರು ಕಂಪ್ಲೀಟ್ ಲಾಕ್ ಆಗಿದೆ. ಬೆಂಗಳೂರು ನಗರದ ಪ್ರಮುಖ ರಸ್ತೆಯಲ್ಲಿ ಟ್ರಾಫಿಕ್ ಕಾವು ಏರುತ್ತಿದೆ. ಟೌನ್ ಹಾಲ್ ಜಂಕ್ಷನ್, ಮೈಸೂರು ವೃತ್ತ ಬಳಿಯ ಎಲ್ಲ ರಸ್ತೆಗಳು, ಕಾರ್ಪೊರೇಷನ್, ಕೆಆರ್ ವೃತ್ತ, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್, ಮೌರ್ಯ ವೃತ್ತ, ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳು, ಲಗ್ಗರೆ ಜಂಕ್ಷನ್, ರಾಜಕುಮಾರ್ ಸಮಾಧಿ ರಸ್ತೆ, ಗಳಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆ ಎಲ್ಲೆಡೆ ಕೈಗೊಳ್ಳಲಾಗಿದೆ. ಬಾಗಲಕೋಟೆಯಲ್ಲಿ ಬಂದ್ ಕಾವು ಬಾಗಲಕೋಟೆ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಹುನಗುಂದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ಬಂದ್ ಮಾಡಲಾಗಿದ್ದು, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕ ಘಟಕಗಳಿಂದ ಪ್ರತಿಭಟನೆಯ ಕಾವು ಏರುತ್ತಿದೆ. ಬಂದ್ ಹಿನ್ನಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಚಿತ್ರದುಗ೯ ಸೋಲ್ಹಾಪೂರ ಪ್ರಯಾಣಿಕರ ಪರದಾಡುವಂತಾಗಿದೆ. ರಾಜ್ಯ ಸಕಾ೯ರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರತಿಭಟನೆ ವೇಳೆ ಹೆಚ್ಚುವರಿ ಪೋಲಿಸ ಭದ್ರತೆ ನಿಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರು ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇಂದು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್‌ ಮಾಡುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ರೈಲು, ಮೆಟ್ರೊ ರೈಲು ಹಾಗೂ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳನ್ನು ತಡೆದು ಪ್ರತಿಭಟಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ. ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್‌ ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಈ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರತಿಭಟನೆ ತೀವ್ರತೆ ನೋಡಿಕೊಂಡು ಭದ್ರತೆ ಹೆಚ್ಚಿಸಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ.


from India & World News in Kannada | VK Polls https://ift.tt/2S3fPHR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...