ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಮತ್ತೆ ಜಮೀನ್ದಾರಿ ಪದ್ದತಿಗೆ ಹೋಗುವ ಅನುಮಾನವಿದೆ ; ಎಚ್‌ಡಿಕೆ

ಬೆಂಗಳೂರು: ತಿದ್ದುಪಡಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಕೊರೊನಾದಂತಹ ಕೆಟ್ಟ ಪರಿಸ್ಥಿತಿಯಲ್ಲಿ ಈ ರೀತಿಯ ಸಂಶಯ, ಅನುಮಾನ ಇರುವ ತಿದ್ದುಪಡಿ ಸುಗ್ರೀವಾಜ್ಞೆ ತರುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿರುವ ಎಚ್‌ಡಿಕೆ, ರೈತ ಸಂಘಟನೆಗಳ ಜೊತೆಗೆ ಚರ್ಚೆ ಮಾಡಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕಿತ್ತು. ಕೊರೊನಾ ಹರಡುವಿಕೆಗೆ ನಾವೇ ಕಾರಣವಾಗುತ್ತಿದ್ದೇವೆ ಎಂದು ಆರೋಪ ಬರ್ತಿದೆ. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಮತ್ತೆ ಜಮೀನ್ದಾರಿ ಪದ್ದತಿಯ ವಾತಾವರಣಕ್ಕೆ ಹೋಗುತ್ತಿದ್ದೇವೆ ಎಂದು ಅನುಮಾನವಾಗಿದೆ ಎಂದು ಹೇಳಿದರು. 40 ಯುನಿಟ್‌ವರೆಗೆ ಭೂಮಿ ಹೊಂದಲು ತಿದ್ದುಪಡಿಯಲ್ಲಿ‌ ಅವಕಾಶ ನೀಡಲಾಗಿದೆ. 79 ಎ ಹಾಗೂ 79 ಬಿ ಕಾನೂನಿನಲ್ಲಿ ಕೆಲವೊಂದು ನೂನ್ಯತೆ ಇದೆ ಹೌದು ಎಂದ ಕುಮಾರಸ್ವಾಮಿ, ಇದನ್ನು ದ್ವೇಷಕ್ಕೆ ದುರ್ಬಳಕೆ ಮಾಡಿಕೊಳ್ಳುವ ಅಪಾಯವೂ ಇದೆ. ನಮ್ಮ ಕುಟುಂಬದ ಮೇಲೂ ಇದನ್ನು ಪ್ರಯೋಗ ಮಾಡಿದ್ದಾರೆ ಎಂದು ಹೇಳಿದರು. ಅಲ್ಲದೇ ಈ ಕುರಿತಾಗಿ ಲೋಕಾಯುಕ್ತ ತನಿಖೆಯೂ ನಡೆದಿದೆ ಎಂದ ಕುಮಾರಸ್ವಾಮಿ, ರೈತರಲ್ಲಿ ಒಂದು ರೀತಿಯ ಆತಂಕ ಇದೆ. ರೈತ ಲಾಭ ಬರಲಿ ನಷ್ಟ ಆಗಲಿ ಹೊಲದಲ್ಲಿ ದುಡಿಯುತ್ತಾನೆ. ಕೊರೊನಾ ಸಂದರ್ಭದಲ್ಲಿ ದಾಖಲೆ ಪ್ರಮಾಣದಲ್ಲಿ ಬಿತ್ತನೆ ಆಗಿದೆ. ಬೆಂಗಳೂರು ಬಡಾವಣೆಗಾಗಿ ಭೂಮಿಯನ್ನು ವಶಪಡಿಸಿಕೊಂಡ ರೈತರಿಗೆ ಏನು ಅನುಕೂಲ ಆಯಿತು ಎಂದು ಪ್ರಶ್ನಿಸಿದರು. ಇದೇ ವೇಳೆ ಈ ನಿಟ್ಟಿನಲ್ಲಿ ಲೋಪಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.


from India & World News in Kannada | VK Polls https://ift.tt/369NPdy

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...