ರಾಮನಗರ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರಲು ಹೊರಟಿರುವ ಕಾರ್ಮಿಕ ಕಾನೂನು, ಭೂ ಸುಧಾರಣ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಪ್ರತಿಭಟನೆಗೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಸಾಂಕೇತಿಕವಾಗಿ ಬೆಂಬಲ ಸೂಚಿಸಿವೆ. ಶುಕ್ರವಾರ ಜಿಲ್ಲೆಯಲ್ಲಿ ಹೆದ್ದಾರಿ ಸಂಚಾರ ತಡೆದ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ. ನಾಲ್ಕು ತಾಲೂಕಿನಲ್ಲಿಯೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ಪದಾಧಿಕಾರಿಗಳು ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಮಾಗಡಿ ತಾಲೂಕಿನಲ್ಲಿ ಕುದೂರು ಹ್ಯಾಂಡ್‌ಪೋಸ್ಟ್, ಚನ್ನಪಟ್ಟಣದಲ್ಲಿ ಸಾತನೂರು ಸರ್ಕಲ್, ಕನಕಪುರದಲ್ಲಿ ಹೆದ್ದಾರಿ, ರಾಮನಗರದ ಐಜೂರು ವೃತ್ತದಲ್ಲಿ ಬೆಳಗ್ಗೆ 11 ಗಂಟೆಗೆ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಬೈರೇಗೌಡ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣ ಕಾಯ್ದೆ, ಭೂ ಸ್ವಾಧೀನಾ ಕಾಯ್ದೆ ತಿದ್ದುಪಡಿ, ಆಮೇಲೆ ವಿದ್ಯುತ್‌ಚ್ಛಕ್ತಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳನ್ನು ವಾಮ ಮಾರ್ಗದಲ್ಲಿ ಜಾರಿಗೆ ತರಲು ಕೇಂದ್ರ ಸರಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಈ ವಿಚಾರವಾಗಿ ಅಧಿವೇಶದಲ್ಲಿಎಪಿಎಂಸಿ ಮಂಡನೆ ಆಗಿದೆ ಎಂದು ಹೇಳಿದರು. ಸೆ.28 ಪೂರ್ಣ ಬಂದ್ ಸೆ.28ರ ಸೋಮವಾರ ನಡೆಯಲಿರುವ ಕರ್ನಾಟಕ ಬಂದ್ ಸಂಪೂರ್ಣವಾಗಿ ಬೆಂಬಲಿಸಲು ಕಾರ್ಮಿಕ ಹಾಗೂ ರೈತ ಸಂಘಟನೆಗಳು ನಿರ್ಧರಿಸಿವೆ. ಕೈಗಾರಿಕಾ ಪ್ರದೇಶ ಇನ್ನು ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಮಿಕರು ಸಹ ಶುಕ್ರವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ 11.30ರಿಂದ ಆರಂಭಗೊಂಡು 15 ನಿಮಿಷಗಳ ಕಾಲ ತಡೆ ನಡೆಸಲಿದ್ದಾರೆ. ತೊಂದರೆ ಇಲ್ಲ ಕಾರ್ಮಿಕ ಹಾಗೂ ರೈತ ಸಂಘಟನೆಗಳು ಕೇವಲ ಸಾಂಕೇತಿಕವಾಗಿ ಜಿಲ್ಲೆಯಲ್ಲಿ ಹೆದ್ದಾರಿ ತಡೆ ನಡೆಸಲಿದ್ದಾರೆ. ಅದು ಕೆಲವು ನಿಮಿಷಗಳಿಗೆ ಮಾತ್ರ ಸೀಮಿತವಾಗಿರುವ ಕಾರಣ, ಜನರಿಗೆ ಹೆಚ್ಚು ತೊಂದರೆಯಾಗದು. ಇನ್ನು ರೈತ ಸಂಘಟನೆಗಳ ಪ್ರತಿಭಟನೆ 10ರಿಂದ 15 ನಿಮಿಷಕ್ಕೆ ಸೀಮಿತವಾಗಿದೆ. ಈಗಾಗಿ ಹೆಚ್ಚು ತೊಂದರೆಯಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಶುಕ್ರವಾರ ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಿದ್ದೇವೆ. ಸೆ.28ರಂದು ಸಂಪೂರ್ಣವಾಗಿ ಬಂದ್ ಮಾಡುತ್ತೇವೆ. ಭೈರೇಗೌಡ, ಜಿಲ್ಲಾಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶುಕ್ರವಾರ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ರಾಘವೇಂದ್ರ ಬಿ.ಬಿ. ಸಿಐಟಿಯು, ಪ್ರಧಾನ ಕಾರ್ಯದರ್ಶಿ ಬಿಡದಿ ಸ್ಥಳೀಯ ಸಮಿತಿ.
from India & World News in Kannada | VK Polls https://ift.tt/3cG2TRL