ಹೊಸದಿಲ್ಲಿ: ಚೀನಾದ ಮತ್ತೊಂದು ತಂಟೆಯಿಂದ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವ ಸಂದರ್ಭದಲ್ಲಿಯೇ ಪ್ರಧಾನಿ ನೇತೃತ್ವದ ಕೇಂದ್ರ ಸರಕಾರ ಮತ್ತೊಮ್ಮೆ ಡಿಜಿಟಲ್ ಸ್ಟ್ರೈಕ್ ಮಾಡಿದ್ದು, ಪಬ್‌ಜಿ ಸೇರಿ ಚೀನಾದ 118 ಆ್ಯಪ್‌ಗಳನ್ನು ನಿಷೇಧಿಸಿದೆ. ಈ ಮೂಲಕ ಡ್ರ್ಯಾಗನ್ ರಾಷ್ಟ್ರಕ್ಕೆ ಬಿಗ್ ತಿರುಗೇಟು ನೀಡಿದೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ ಕಾಪಾಡುವ ಹಾಗೂ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ ಗೇಮ್ ಆಡುವವರಿದ್ದಾರೆ ಎಂದು ವರದಿಗಳು ತಿಳಿಸಿವೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದಂತೆ 118 ಆಪ್‌ಗಳನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ನಿಷೇಧಿಸಲಾಗಿದೆ. ಅವರು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದರು. ರಾಷ್ಟ್ರದ ಭದ್ರತೆಯ ಉದ್ದೇಶಕ್ಕಾಗಿ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಸರಕಾರದ ಈ ಕ್ರಮವು ಕೋಟ್ಯಂತರ ಭಾರತೀಯ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುವ ಕೆಲ ಮೊಬೈಲ್ ಅಪ್ಲಿಕೇಶನ್‌ಗಳು ಬಳಕೆದಾರರ ಮಾಹಿತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಹಲವಾರು ದೂರುಗಳು ಮಂತ್ರಾಲಯಕ್ಕೆ ಬಂದಿದ್ದವು ಎಂದು ತಿಳಿಸಿದೆ. ಗೃಹ ಸಚಿವಾಲಯದ ಸೈಬರ್ ಅಪರಾಧ ಕೇಂದ್ರವು ಸಹ ಈ ದುರುದ್ದೇಶಪೂರಿತ ಆಪ್‌ಗಳನ್ನು ನಿರ್ಬಂಧಿಸಲು ಶಿಫಾರಸು ಮಾಡಿದೆ ಎಂದು ಸರಕಾರ ತಿಳಿಸಿದೆ. ಈ ಹಿಂದೆಯೂ ಕೂಡ ಎರಡು ಬಾರಿ ಸರಕಾರ ಡಿಜಿಟಲ್ ಸ್ಟ್ರೈಕ್ ಮೂಲಕ ಟಿಕ್‌ಟಾಕ್, ಹೆಲೋ, ಶೇರ್‌ಚಾಟ್ ಸೇರಿ ಮೂಲದ ಅನೇಕ ಆಪ್‌ಗಳನ್ನು ಕೇಂದ್ರ ಸರಕಾರ ನಿಷೇಧಿಸಿತ್ತು.
from India & World News in Kannada | VK Polls https://ift.tt/3gR8CVb