ಹೊಸದಿಲ್ಲಿ: ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಓವರ್‌ನಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ತಂಡ ಹದಿಮೂರನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಪಂದ್ಯದಲ್ಲಿ ಇಂದು (ಅ.3) ಅಬುಧಾಬಿಯ ಶೇಖ್ ಜಾಹೇದ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ. ಆರ್‌ಸಿಬಿ ಹಾಗೂ ರಾಜಸ್ಥಾನ್ ಹಿಂದಿನ ವಿಭಿನ್ನ ಫಲಿತಾಂಶಗಳೊಂದಿಗೆ ಮುಖಾಮುಖಿಯಾಗುತ್ತಿವೆ. ಅದ್ಭುತ ನಾಯಕರಾಗಿ ಹಾಗೂ ಆಟಗಾರರಾಗಿ ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್ ಮೊದಲ ಬಾರಿ ಐಪಿಎಲ್ ಟೂರ್ನಿಯಲ್ಲಿ ಎದುರಾಗುತ್ತಿದ್ದಾರೆ. ಈ ರೋಚಕ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ಕಳೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಹೊರತಾಗಿಯೂ ಸೂಪರ್ ಓವರ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಬೇಕಾಗಿತ್ತು. ಆರೋನ್ ಫಿಂಚ್, ದೇವದತ್ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್ ಈ ಮೂರು ಬ್ಯಾಟ್ಸ್‌ಮನ್‌ಗಳು ಅರ್ಧಶತಕ ಸಿಡಿಸಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಆದರೆ, ತಂಡದಲ್ಲಿ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಮಸ್ಯೆ ಇದೆ. ಕಳೆದ ಪಂದ್ಯವಾಡಿದ ಆಟಗಾರರನ್ನೇ ಬದಲಾವಣೆ ಇಲ್ಲದೆ ಆರ್‌ಸಿಬಿ ಕಣಕ್ಕೆ ಇಳಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಸಂಭಾವ್ಯ ಇಲೆವೆನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಎರಡೂ ತಂಡಗಳು ಮೊದಲನೇ ಪಂದ್ಯದಲ್ಲಿ ಗೆದ್ದು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಶುಭಾರಂಭ ಮಾಡಿವೆ. ಶನಿವಾರ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಕೆಕೆಆರ್ ವಿರುದ್ಧ ಸೋಲು ಅನುಭವಿಸಿತ್ತು. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆರೋನ್ ಫಿಂಚ್, ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್(ವಿ.ಕೀ), ಜೋಶ್ ಫಿಲಿಪ್, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಉಮೇಶ್ ಯಾದವ್, ನವದೀಪ್ ಸೈನಿ, ಡೇಲ್ ಸ್ಟೇನ್, ಯಜ್ವೇಂದ್ರ ಚಹಲ್. ಜೋಸ್ ಬಟ್ಲರ್ ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇನ್ನೂ ಹೇಳಿಕೊಳ್ಳುವಂಥ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಅವರು ಕೇವಲ ನಾಲ್ಕು ರನ್‌ಗಳಿಗೆ ಸೀಮಿತರಾಗಿದ್ದರು. ಆದರೆ, ಕಳೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎರಡು ಸಿಕ್ಸರ್‌ಗಳೊಂದಿಗೆ 21 ರನ್‌ಗಳಿಗೆ ಸೀಮಿತರಾಗಿದ್ದರು. ಬೇರೆ ಬ್ಯಾಟ್ಸ್‌ಮನ್‌ಗಳೊಂದಿಗೆ ಅಗ್ರ ಕ್ರಮಾಂಕದಲ್ಲಿ ಜೋಸ್ ಬಟ್ಲರ್ ಅವರ ಕಡೆಯಿಂದ ತಂಡ ಹೆಚ್ಚು ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಹಾಗಾಗಿ, ಅವರು ಈ ಪಂದ್ಯದಲ್ಲಿ ಆಡಲೇಬೇಕಾದ ಒತ್ತಡ ಅವರ ಮೇಲಿದೆ. ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್(ವಿ.ಕೀ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸ್ಟೀವನ್ ಸ್ಮಿತ್(ನಾಯಕ), ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಟಾಮ್ ಕರನ್, ಜೋಪ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್ ಹಾಗೂ ಜಯದೇವ್ ಉನಾದ್ಕತ್ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್ ಸಮಯ: ಇಂದು ಮಧ್ಯಾಹ್ನ 3:30 (ಭಾರತೀಯ ಕಾಲಮಾನ) ದಿನಾಂಕ: ಇಂದು (ಅ.3) ಸ್ಥಳ: ಶೇಖ್ ಜಾಹೇದ್ ಕ್ರೀಡಾಂಗಣ, ಅಬುಧಾಬಿ ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ಸ್
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3nffO1O