ಗಾಂಧಿ ಜಯಂತಿಯಂದು ಪ್ರತಿಭಟಿಸುತ್ತಿರುವ ರೈತರು ಜಯಶಾಲಿಯಾಗಲಿದ್ದಾರೆ: ಸೋನಿಯಾ ಗಾಂಧಿ

ಹೊಸದಿಲ್ಲಿ: ಹಾಗೂ ಲಾಲ್ ಬಹದ್ದೂರ್‌ ಶಾಸ್ತ್ರಿ ಜನ್ಮ ದಿನಾಚರಣೆಯ ದಿನದಂದೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷೆ ಕಿಡಿಕಾರಿದ್ದಾರೆ. ಇಂದು ನಾವು ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್‌ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವಾಗ, ರೈತರು ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ರೈತರು ಮತ್ತು ಕಾಂಗ್ರೆಸ್‌ನ ಈ ಆಂದೋಲನದಲ್ಲಿ ಯಶಸ್ವಿಯಾಗಲಿದೆ ಮತ್ತು ರೈತರು ಈ ಹೋರಾಟದಲ್ಲಿ ವಿಜಯಶಾಲಿಯಾಗುತ್ತಾರೆ ಎಂದು ನಾನು ನಂಬುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳೀದ್ದಾರೆ. ಕಳೆದ ಕೆಲವು ದಿನಗಳಿಂದ ಕೇಂದ್ರ ಸರಕಾರದ ಮೂರು ಜಾರಿಗೆ ತಂದಿರುವ ಕಾನೂನಿನ ವಿರುದ್ಧ ರೈತರೊಂದಿಗೆ ಸೇರಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಹಲವೆಡೆ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಇಂದು ಕೂಡ ಹಲವೆಡೆ ರೈಲು ತಡೆ, ರಸ್ತೆ ತಡೆಗಳನ್ನು ಕಾಂಗ್ರೆಸ್‌ ಹಾಗೂ ರೈತರು ನಡೆಸುತ್ತಿದ್ದಾರೆ. ಪಂಜಾಬ್‌ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು ರೈಲಿನ ಟ್ರ್ಯಾಕ್‌ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರ ಆದಷ್ಟೂ ಬೇಗ ಜಾರಿಗೊಳಿಸಿರುವ ಕಾನೂನುಗಳನ್ನು ವಾಪಾಸ್‌ ಪಡೆಯುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ಈ ತಿಂಗಳ 4ರವರಗೆಎ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.


from India & World News in Kannada | VK Polls https://ift.tt/3cNRIGo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...