ರಾಹುಲ್‌‌ ಜೊತೆ ಖಾಕಿ ದುರ್ವರ್ತನೆ ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ದೌರ್ಜನ್ಯ: ರಾವತ್‌

ಮುಂಬಯಿ: ಉತ್ತರ ಪ್ರದೇಶದ ಹತ್ರಾಸ್‌ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಲು ಹೋದ ವೇಳೆ ಯುಪಿ ಪೊಲೀಸರು ಕಾಂಗ್ರೆಸ್‌ ನಾಯಕ ಜೊತೆ ನಡೆದುಕೊಂಡ ವರ್ತನೆಗೆ ಶಿವಸೇನೆಯ ಹಿರಿಯ ನಾಯಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ವಿರುದ್ಧ ಕಿಡಿಕಾರಿದ ರಾವುತ್, ಇದು ದೇಶದ ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ನಡೆದ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ರಾವುತ್‌, ರಾಹುಲ್ ಗಾಂಧಿ ಒಬ್ಬ ರಾಷ್ಟ್ರೀಯ ರಾಜಕೀಯ ನಾಯಕ. ನಮಗೆ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರೊಂದಿಗೆ ಪೊಲೀಸರ ವರ್ತನೆಯನ್ನು ಯಾರೂ ಬೆಂಬಲಿಸಲು ಸಾಧ್ಯವಿಲ್ಲ. ಅವರ ಕೊರಳ ಪಟ್ಟಿ ಹಿಡಿದು ಅವರನ್ನು ನೆಲಕ್ಕೆ ತಳ್ಳಲಾಯಿತು, ಇದು ಒಂದು ರೀತಿಯಲ್ಲಿ ದೇಶದ ಪ್ರಜಾಪ್ರಭುತ್ವದ ಮೇಲಿನ ಸಾಮೂಹಿಕ ಅತ್ಯಾಚಾರವಾಗಿದೆ ಎಂದು ಹೇಳಿದರು. ಗುರುವಾರ ಮಧ್ಯಾಹ್ನ, ದೆಹಲಿ-ನೋಯ್ಡಾ ಗಡಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಪೊಲೀಸರು ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಗೆ ಪ್ರಯಾಣಿಸುವುದನ್ನು ತಡೆದಿದ್ದರು. ಇದು ಭಾರೀ ಗಲಾಟೆಗೆ ಕಾರಣವಾಯಿತು. ಹತ್ರಾಸ್‌ಗೆ ತೆರಳಲು ಸಾಧ್ಯವಿಲ್ಲ ಎಂದು ಹೇಳಿದ ಮೇಲೂ ರಾಹುಲ್‌ ಗಾಂಧಿ ಹೋಗಲು ಮುಂದಾದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ರಾಹುಲ್‌ ಗಾಂಧಿ ಕೆಳಕ್ಕೆ ಬಿದ್ದರು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.


from India & World News in Kannada | VK Polls https://ift.tt/3nlcIcG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...