'ಕಿಂಗ್ಸ್‌ ಇಲೆವೆನ್‌ ಪಂಜಾಬ್‌ಗೆ ಈತ ಅಸಾಧಾರಣ ಆಟಗಾರ' : ಬಿಷ್ಣೋಯ್‌ ಬೌಲಿಂಗ್‌ ಶ್ಲಾಘಿಸಿದ ಅರ್ಷ್‌ದೀಪ್‌!

ದುಬೈ: ವಿರುದ್ಧ ತಂಡದ ಪ್ರದರ್ಶನದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್‌ ವೇಗಿ ಅರ್ಷ್‌ದೀಪ್‌ ಸಿಂಗ್ ಸಹ ಆಟಗಾರ ರವಿ ಬಿಷ್ಣೋಯ್‌ ಅವರ 'ಅಸಾಧಾರಣ' ಪ್ರದರ್ಶನವನ್ನು ಕೊಂಡಾಡಿದರು. ಶನಿವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ , ನಿಗದಿತ 20 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 126 ರನ್‌ಗಳನ್ನು ಗಳಿಸಿತು. ಬಳಿಕ ಗುರಿ ಹಿಂಬಾಲಿಸಿದ ಸನ್‌ರೈಸರ್ಸ್ ಹೈದರಾಬಾದ್‌ ತಂಡ 19.5 ಓವರ್‌ಗಳಿಗೆ 114 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ 12 ರನ್‌ಗಳಿಂದ ಸೋಲು ಅನುಭವಿಸಿತು. ಈ ಪಂದ್ಯದಲ್ಲಿ ಬಿಷ್ಣೋಯ್‌ 4 ಓವರ್‌ಗಳಿಗೆ 13 ರನ್‌ಗಳನ್ನು ನೀಡಿ ಡೇವಿಡ್‌ ವಾರ್ನರ್‌ ಅವರ ಮುಖ್ಯ ವಿಕೆಟ್‌ ಪಡೆದರು. ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರ್ಷ್‌ದೀಪ್ ಸಿಂಗ್, "ನಮಗೆ ರವಿ ಬಿಷ್ಣೋಯ್‌ ಅಸಾಧಾರಣ ಆಟಗಾರರಾಗಿದ್ದಾರೆ. ಅವರು ನಿಜವಾಗಿಯೂ ಅತ್ಯುತ್ತಮ ಬೌಲಿಂಗ್‌ ಮಾಡುತ್ತಿದ್ದಾರೆ. ಪಂದ್ಯದಲ್ಲಿ ಅವರ ಎಕಾನಮಿ ಅತ್ಯಂತ ಮುಖ್ಯ ಸಂಗತಿಯಾಗಿತ್ತು. ಅವರು ಅವಕಾಶಯನ್ನು ಸಂಪೂರ್ಣ ಸದುಪಯೋಗಪಡಿಸಿಕೊಂಡರು," ಎಂದು ಶ್ಲಾಘಿಸಿದರು. ಮಧ್ಯಮ ಓವರ್‌ಗಳಲ್ಲಿ ಕೂಡ ಅದ್ಭುತ ಪ್ರದರ್ಶನ ತೋರುವ ಮೂಲಕ ಮೂರು ವಿಕೆಟ್‌ಗಳನ್ನು ಪಡೆದರು. ಕ್ರಿಸ್‌ ಜೋರ್ಡನ್ ಕೂಡ ಮೂರು ವಿಕೆಟ್‌ಗಳನ್ನು ಪಡೆಯುವ ಮೂಲಕ ಕಿಂಗ್ಸ್ ಇಲೆವೆನ್‌ ಪಂಜಾಬ್‌ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಕಿಂಗ್ಸ್ ಇಲೆವೆನ್‌ ಪಂಜಾಬ್‌ 10 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಐದನೇ ಸ್ಥಾನಕ್ಕೇರಿತು. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಎಂಟು ಅಂಕಗಳೊಂದಿಗೆ ಆರನೇ ಸ್ಥಾನ ಪಡೆಯಿತು. ಪ್ಲೇಆಫ್‌ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಂಡ ಒಂದೊಂದು ಪಂದ್ಯದ ಕಡೆ ಗಮನ ಹರಿಸುತ್ತಿದೆ. ಹಾಗಾಗಿ ಪ್ಲೇಆಫ್‌ ಬಗ್ಗೆ ಚಿಂತೆ ಮಾಡುತ್ತಿಲ್ಲ ಎಂದು ಹೇಳಿದರು. "ನಾವು ಪ್ಲೇಆಫ್‌ ಬಗ್ಗೆ ಚಿಂತೆ ಮಾಡುತ್ತಿಲ್ಲ. ಒಂದು ಪಂದ್ಯದಿಂದ ಮತ್ತೊಂದು ಪಂದ್ಯದ ಬಗ್ಗೆ ಗಮನ ಹರಿಸುತ್ತಿದ್ದೇವೆ. ನಾವು ಸೂಪರ್‌ ಓವರ್‌ನಲ್ಲಿ ಗೆಲುವು ಸಾಧಿಸಿದ ಬಳಿಕ ತಂಡದಲ್ಲಿ ಆಟಗಾರರ ವಿಶ್ವಾಸ ಬದಲಾಯಿತು ಹಾಗೂ ತಂಡಕ್ಕೆ ಅಗತ್ಯವಿರುವ ಏನಾದರೂ ಮಾಡುತ್ತೇವೆ ಎಂಬ ನಂಬಿಕೆ ನಮಗಿದೆ. ಕೇವಲ ನಮ್ಮ ಯೋಜನೆಗಳಿಗೆ ಅಂಟಿಕೊಂಡು ಯಶಸ್ವಿಯಾಗುತ್ತಿದ್ದೇವೆ" ಎಂದು ಅರ್ಷ್‌ದೀಪ್‌ ಸಿಂಗ್‌ ತಿಳಿಸಿದರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3jsJbdQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...