
ಅಬುಧಾಬಿ: ರಾಜಸ್ಥಾನ್ ರಾಯಲ್ಸ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ಬೆನ್ ಸ್ಟೋಕ್ಸ್ ಹಾಗೂ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಪ್ರದರ್ಶನವನ್ನು ಮುಂಬೈ ಇಂಡಿಯನ್ಸ್ ಶ್ಲಾಘಿಸಿದರು. 196 ರನ್‌ಗಳ ಗುರಿಯನ್ನು ಬೆನ್ನತ್ತಿದ ಪರ ಬೆನ್ ಸ್ಟೋಕ್ಸ್ ಹಾಗೂ ಸಂಜು ಸ್ಯಾಮ್ಸನ್ ಜೋಡಿ ಮೂರನೇ ವಿಕೆಟ್‌ಗೆ ಕೇವಲ 54 ಎಸೆತಗಳಲ್ಲಿ 107 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎಂಟು ವಿಕೆಟ್‌ಗಳ ಗೆಲುವಿಗೆ ನೆರವಾಯಿತು. ಗೆಲುವಿನೊಂದಿಗೆ ರಾಜಸ್ಥಾನ್ ಪಾಯಿಂಟ್ಸ್ ಟೇಬಲ್‌ನಲ್ಲಿ ಆರನೇ ಸ್ಥಾನಕ್ಕೇರಿತು. ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ, " ಅವರು ನಿಜವಾಗಿಯೂ ಅತ್ಯುತ್ತಮ ಬ್ಯಾಟಿಂಗ್ ಮಾಡಿದರು ಎಂದು ಭಾವಿಸುತ್ತೇನೆ. ಪಂದ್ಯದಲ್ಲಿ ಅವರು ತೋರಿದ ಕೌಶಲ ನಮಗೆ ಹಿನ್ನಡೆಯಾಯಿತು. ರಾಜಸ್ಥಾನ್ ರಾಯಲ್ಸ್ ಗೆಲುವಿನ ಶ್ರೇಯ ಸಂಜು ಸ್ಯಾಮ್ಸನ್ ಹಾಗೂ ಬೆನ್ ಸ್ಟೋಕ್ಸ್‌ಗೆ ಸಲ್ಲುತ್ತದೆ. ಈ ಇಬ್ಬರೂ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ," ಎಂದು ಶ್ಲಾಘಿಸಿದರು. "ಅವರು ಅವಕಾಶವನ್ನು ಸದುಪಯೋಗ ಪಡಿಸಿಕೊಂಡರು ಎಂದು ನಾನು ಭಾವಿಸುತ್ತೇನೆ ಹಾಗೂ ಹೆಚ್ಚು ಅದೃಷ್ಟ ಅವರ ಕಡೆ ಇತ್ತು. ಆದರೆ, ಹಲವು ಇನ್‌ಸೈಡ್ ಎಡ್ಜ್‌ಗಳಿಂದ ಅವರು ಕೆಲ ಬೌಂಡರಿಗಳನ್ನು ಪಡೆದುಕೊಂಡರು. ಇದರ ಜತೆಗೆ, ಈ ಜೋಡಿ ಕೆಲ ಅಸಾಧಾರಣ ಶಾಟ್‌ಗಳನ್ನು ಹೊಡೆದಿದ್ದಾರೆ," ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದರು. ಸೋಲಿನ ಹೊರತಾಗಿಯೂ ಮುಂಬೈ ಇಂಡಿಯನ್ಸ್ 11 ಪಂದ್ಯಗಳಿಂದ 14 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನದಲ್ಲಿಯೇ ಉಳಿಯಿತು. ಪಂದ್ಯದಲ್ಲಿ ಎಸಗಿದ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ಪಂದ್ಯಗಳಿಗೆ ಕಣಕ್ಕೆ ಇಳಿಯುವುದಾಗಿ ಹಾರ್ದಿಕ್ ಪಾಂಡ್ಯ ಹೇಳಿದರು. ಮೊದಲು ಬ್ಯಾಟಿಂಗ್ ವಿರುದ್ಧ ಸೌರಭ್ ತಿವಾರಿ ಹಾಗೂ ಹಾರ್ದಿಕ್ ಪಾಂಡ್ಯ ಅವರು ಕೊನೆಯ ನಾಲ್ಕು ಓವರ್‌ಗಳಿಗೆ 74 ರನ್‌ಗಳನ್ನು ಗಳಿಸಿದ್ದರು. ಆ ಮೂಲಕ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಿಗೆ ಐದು ವಿಕೆಟ್ ಕಳೆದುಕೊಂಡು 195 ರನ್‌ಗಳನ್ನು ಗಳಿಸಿತು. ಹಾರ್ದಿಕ್ ಪಾಂಡ್ಯ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ರಾಜಸ್ಥಾನ್ ರಾಯಲ್ಸ್ ಪರ ಜೋಫ್ರ ಆರ್ಚರ್ ಹಾಗೂ ಶ್ರೇಯಸ್ ಗೋಪಾಲ್ ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಮುಂಬೈ ಇಂಡಿಯನ್ಸ್ ಅ.28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂದಿನ ಪಂದ್ಯವಾಡಲಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3mm4Kyv