ಆರ್‌ಆರ್‌ ನಗರದಲ್ಲಿ ಮತದಾರರಿಗೆ ಸೆಟ್‌ಟಾಪ್‌ ಬಾಕ್ಸ್, ಫೀ ಮಾಫಿ ಅಮಿಷ! ಚುನಾವಣಾ ಆಯೋಗದ ಕ್ರಮವೇನು?

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣಾ ಕಣ ರಂಗೇರುತ್ತಿದೆ. ಇನ್ನೇನು ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಮತದಾರರನ್ನು ಸೆಳೆದುಕೊಳ್ಳಲು ಅಭ್ಯರ್ಥಿಗಳು ನಾನಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಅದರಲ್ಲೂ ಆರ್‌ಆರ್‌ ನಗರದಲ್ಲಿ ಸೆಟ್‌ಟಾಪ್‌ ಬಾಕ್ಸ್, ವಿದ್ಯಾರ್ಥಿಗಳಿಗೆ ಶಾಲಾ ಫೀಸ್ ಮಾಫಿ ಅಮಿಷಗಳು ಸಾಕಷ್ಟು ಸದ್ದು ಮಾಡುತ್ತಿದೆ. ಹೀಗಿದ್ದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳದೇ ಇರುವುದು ಚರ್ಚೆಗೆ ಗ್ರಾಸವಾಗಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮತದಾರರಿಗೆ ಉಚಿತ ಸೆಟ್‌ಟಾಪ್‌ ಬಾಕ್ಸ್ ವಿತರಣೆ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಮಾಡುತ್ತಿದೆ. ಈ ಕುರಿತಾಗಿ ಕ್ರಮವನ್ನು ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಿದೆ. ಆದರೆ ಕ್ಷೇತ್ರದ ಜನರಿಗೆ ಸೆಟ್‌ಟಾಪ್‌ ಬಾಕ್ಸ್ ನೀಡುವುದನ್ನು ಬಿಜೆಪಿ ಅಭ್ಯರ್ಥಿ ಮುನಿರತ್ನ ಸಮರ್ಥನೆ ಮಾಡುತ್ತಿದ್ದಾರೆ. ನಾನೊಬ್ಬ ಉದ್ಯಮಿ, ಈ ಕಾರಣಕ್ಕಾಗಿ ಸೆಟ್‌ಟಾಪ್‌ ಬಾಕ್ಸ್ ಕೊಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುತ್ತಿದ್ದಾರೆ. ದೂರು ಕೊಟ್ರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂಬುವುದು ಅವರ ವಾದ. ಡಿಕೆಶಿಯಿಂದ ವಿದ್ಯಾರ್ಥಿಗಳ ಫೀ ಮಾಫಿ! ಮುನಿರತ್ನ ವಿರುದ್ಧ ಸೆಟ್‌ಟಾಪ್‌ ಬಾಕ್ಸ್ ಉಚಿತ ವಿತರಣೆಯ ಆರೋಪ ಇದ್ದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಶಾಲಾ -ಕಾಲೇಜು ಮಕ್ಕಳಿಗೆ ಶೈಕ್ಷಣಿಕ ಶುಲ್ಕ ಮಾಫಿ ಮಾಡುತ್ತಿರುವ ಆರೋಪವಿದೆ. ಬಿಜೆಪಿ ಈ ಆರೋಪವನ್ನು ಮಾಡುತ್ತಿದೆ. ಡಿ.ಕೆ ಶಿವಕುಮಾರ್ ಒಡೆತನದ ಶಾಲಾ- ಕಾಲೇಜುಗಳಲ್ಲಿ ಮಕ್ಕಳಿಗೆ ಫೀಸ್ ಮಾಫಿ ಮಾಡಲಾಗುತ್ತದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಇದು ಕೂಡಾ ಚುನಾವಣಾ ಸಂದರ್ಭದಲ್ಲಿ ನೀಡುವ ಅಮಿಷ ಆಗುವುದಿಲ್ಲವೇ ಎಂಬುವುದು ಅವರ ಪ್ರಶ್ನೆ. ಚುನಾವಣಾ ಆಯೋಗದ ಕ್ರಮ ಏನು ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಮತದಾರರಿಗೆ ಅಮಿಷ ಒಡ್ಡುವ ಕೆಲಸ ಯಾರೇ ಮಾಡಿದರೂ ಅದನ್ನು ತಡೆಯುವ ಹಾಗೂ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕೆಲಸವನ್ನು ಆಯೋಗ ಮಾಡಬೇಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ನಿಟ್ಟಿನಲ್ಲಿ ಈ ಬಾರಿ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂಬುವುದು ಕ್ಷೇತ್ರದ ಮತದಾರರ ಆಗ್ರಹ.


from India & World News in Kannada | VK Polls https://ift.tt/34zwE4f

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...