ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು ಈಗಾಗಲೇ ಕರ್ನಾಟಕದಲ್ಲಿ ಲಕ್ಷಾಂತರ ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕಾರಣಿಗಳಲ್ಲೂ ಕೂಡ ಕೊರೊನಾ ಸೋಂಕು ಕಾಣಿಸಿಕೊಳ್ಳೋದು ಸಾಮಾನ್ಯವಾಗಿದ್ದು, ಈಗಾಗಲೇ ರಾಜ್ಯದ ಅನೇಕ ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿ ಹಲವರು ಗುಣಮುಖರಾಗಿ ಹೊರಬಂದಿದ್ದಾರೆ. ಇದೀಗ ಆ ಸಾಲಿಗೆ ರಾಜ್ಯ ಘಟಕದ ಉಪಾಧ್ಯಕ್ಷ ಸೇರಿದ್ದು, ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಮಾಹಿತಿಯನ್ನು ಸ್ವತಃ ಅವರೇ ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ವಿಜಯೇಂದ್ರ ಅವರು, ನಾನು ಕೊರೊನಾ ಪರೀಕ್ಷೆ ಮಾಡಿಸಿದಾಗ ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ರಾಜಕಾರಣಿಗಳಿಗೆ ಕೊರೊನಾ ಕಾಣಿಸಿಕೊಳ್ಳೋದು ಸಾಮಾನ್ಯವಾಗಿದ್ದು, ಈ ಹಿಂದೆ ಸಿಎಂ ಬಿಎಸ್ ಯಡಿಯೂರಪ್ಪನವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು ಶಾಸಕರುಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.
from India & World News in Kannada | VK Polls https://ift.tt/36s9VIx