
ಹೊಸದಿಲ್ಲಿ: ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 151ನೇ ಜನ್ಮದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ರಾಷ್ಟ್ರಪತಿ ಮತ್ತು ಪ್ರಧಾನಿ ದೇಶಕಂಡ ಮಹಾನ್ ನಾಯಕರ ಸ್ಮಾರಕಕ್ಕೆ ತೆರಳಿ ಗೌರವ ವಂದನೆ ಅರ್ಪಿಸಿದ್ದಾರೆ. ಮಹಾತ್ಮ ಗಾಂಧಿಯವರ 151ನೇ ಜನ್ಮದಿನ ಹಿನ್ನೆಲೆ ರಾಜ್‌ಘಾಟ್‌ಗೆ ತೆರಳಿದ ಪ್ರಧಾನಿ ಮೋದಿ ಗಾಂಧಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಜನ್ಮದಿನಾಚರಣೆಯ ಹಿನ್ನೆಲೆ ಟ್ವೀಟ್ ಮಾಡಿರುವ ಮೋದಿ, ಮಹಾತ್ಮಾ ಗಾಂಧೀಜಿಯವರ ಜೀವನ ಮತ್ತು ಅವರ ಆಲೋಚನೆಗಳಿಂದ ಕಲಿಯಲು ಸಾಕಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯ ಭಾರತವನ್ನು ಸೃಷ್ಟಿಸಲು ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಹೇಳಿದ್ದಾರೆ. ಈ ಮಧ್ಯೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರಪಿತನ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಕೋವಿಂದ್ ಅವರು, ರಾಷ್ಟ್ರಪಿತ ಗಾಂಧಿಯವರ ಸತ್ಯ, ಅಹಿಂಸೆ ಮತ್ತು ಪ್ರೀತಿಯ ಸಂದೇಶವು ಸಮಾಜದಲ್ಲಿ ಸಾಮರಸ್ಯವನ್ನು ತುಂಬುತ್ತದೆ. ಮತ್ತು ವಿಶ್ವದ ಕಲ್ಯಾಣಕ್ಕೆ ದಾರಿ ಮಾಡಿಕೊಡುತ್ತದೆ. ಅವರು ಮಾನವೀಯತೆಯ ಪ್ರತೀಕವಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/34gGKph