ಬೆಂಗಳೂರು: ಭಾರೀ ಮಳೆಯಿಂದಾದ ಹಾನಿಯಿಂದಾಗಿ ಸಮಸ್ಯೆ ಅನುಭವಿಸುತ್ತಿರುವ ಜನರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಹಾನಿಯಿಂದ ತೊಂದರೆಯಾದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಲಾಗುವುದು ಹಾಗೂ ಈಗಾಗಲೇ 25 ಸಾವಿರ ಹಣವನ್ನು ಪರಿಹಾರವಾಗಿ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುತ್ತಾರೆ. ಮಳೆ ಮತ್ತೆ ಮುಂದುವರಿಯುವ ಸಾಧ್ಯತೆ ಇದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಕ್ಟೋಬರ್ 30 ಕ್ಕೆ ಶಿರಾ ಪ್ರಚಾರ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 30 ರಂದು ಶಿರಾಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಶಿರಾದಲ್ಲಿ ಒಂದು ದಿನ ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ತಿಳಿಸಿದರು. ಈಗಾಗಲೇ ಕಲಬುರಗಿ ಸೇರಿದಂತೆ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ನಡೆಸಿದ್ದು ಅಗತ್ಯ ಬಿದ್ದರೆ ಮತ್ತೊಮ್ಮೆ ನೆರೆ ಪೀಡಿತ ಪ್ರದೇಶಗಳಿಗೆ ತೆರಳುವುದಾಗಿ ಸಿಎಂ ಬಿಎಸ್‌ವೈ ತಿಳಿಸಿದರು.
from India & World News in Kannada | VK Polls https://ift.tt/3jtySWM