‘ಸಿಎಂ ಯಡಿಯೂರಪ್ಪ ಕೆಳಗಿಳಿದ್ಮೇಲೆ ಮುನಿರತ್ನ ಕಥೆ ಗೋವಿಂದಾ..!’ ; ಡಿಕೆಶಿ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದ್ದು, ಮೂರೂ ರಾಜಕೀಯ ಪಕ್ಷಗಳಿಂದ ಮತದಾರರನ್ನು ಸೆಳೆಯುವ ಕಸರತ್ತು ಭಾರೀ ಸದ್ದು ಮಾಡುತ್ತಿದೆ. ಶಿರಾಗಿಂತಲೂ ಕ್ಷೇತ್ರ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿದ ಡಿ.ಕೆ ಶಿವಕುಮಾರ್‌, ಈ ಚುನಾವಣೆ ಬಳಿಕ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರಂತೆ, ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ನಿಮ್ಮ ಹಾಗೂ ನಮ್ಮ ಶ್ರಮವನ್ನು 50 ಕೋಟಿಗೆ ಮಾರಿಕೊಂಡಿದ್ದಾರೆ. ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ. ಇದಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಅವಕಾಶ ಸಿಕ್ಕಿದೆ. ಭವಿಷ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬರುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯವರೇ ಇದೊಂದು ಬಾರಿ ಅವಕಾಶ ಕೊಡುತ್ತೇವೆ ಎಂದಿದ್ದಾರೆ, ಮುಂದಿನ ಬಾರಿ ಇವರಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇವರನ್ನು ಖಾಲಿ ಮಾಡಿಸಿ ಕ್ಷೇತ್ರಕ್ಕೆ ಮುಕ್ತಿ ತಂದುಕೊಡಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ. ಇನ್ನು ಬಿಜೆಪಿ, ಕಾಂಗ್ರೆಸ್‌, ದಳದ ಕಾರ್ಯಕರ್ತರಿಗೆ ಮುಕ್ತಿ ಸಿಗಬೇಕು ಎಂದರೆ ಒಂದೇ ದಾರಿ ಅದು ಕುಸುಮಾ ಅವರ ಗೆಲುವು. ಈ ಚುನಾವಣೆಗಾಗಿ 25 ಕೋಟಿ ಕೊಟ್ಟಿದ್ದಾರಂತೆ. ಅವರು ದುಡ್ಡು ಕೊಟ್ಟರೆ ಯಾರೊಬ್ಬರೂ ಬೇಡ ಅನ್ನ ಬೇಡಿ. ಎಲ್ಲರೂ ಹಣ ತೆಗೆದುಕೊಳ್ಳಿ. ಬಿಜೆಪಿ ನೋಟು, ಕಾಂಗ್ರೆಸ್‌ ಗೆ ಓಟು. ಮುನಿರತ್ನನ ನೋಟು ಕುಸುಮಾಗೆ ಓಟು, ಈ ಕ್ಷೇತ್ರದಲ್ಲಿರುವ ಕೆಟ್ಟ ಹುಳುವನ್ನು ತೆಗಿಯಬೇಕು. ಬಿಜೆಪಿ ಅಭ್ಯರ್ಥಿ ಸೋತರೆ ಪೊಲೀಸರಿಗೂ ಖುಷಿಯಾಗುತ್ತದೆ ಎಂದರು.


from India & World News in Kannada | VK Polls https://ift.tt/37CWvdp

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...