ಮೈಸೂರು: ನವರಾತ್ರಿಯ ವಿಶೇಷ ಹಿನ್ನೆಲೆಯಲ್ಲಿ ಆನೆಗಳಿಗೆ ಅರಣ್ಯ ಇಲಾಖೆಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಪೂಜೆ ನಡೆಯಿತು. ಅಭಿಮನ್ಯು ಆನೆಯ ಮಾವುತ, ಕಾವಾಡಿ ಹೆಸರಿನಲ್ಲಿ ಅರ್ಚನೆ ಮಾಡಿ ಪೂಜೆ ಮಾಡಿಸಲಾಗಿದ್ದು, ಆನೆಗಳ ತಲೆಗೆ ಸೇವಂತಿಗೆ ಹೂವಿನಿಂದ ಸಿಂಗಾರ ಮಾಡಲಾಗಿತ್ತು. ಇದೇ ವೇಳೆ ಆನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನಕಾಯಿ, ಹಣ್ಣು ಬೆಲ್ಲ ಕೊಟ್ಟು ಉಪಚರಿಸಲಾಯ್ತು. ಆನೆಗಳ ಮೇಲೆ ಪುಷ್ಪಾರ್ಚನೆ ಮಾಡಲಾಯ್ತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಈಗಾಗಲೇ ದಸರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಅರಮನೆ ಆವರಣದಲ್ಲಿ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಾರ್ಯಕ್ರಮ ಮಾಡುತ್ತಿದ್ದೇವೆ. ಈಗಾಗಲೇ ಅಧಿಕಾರಿಗಳು ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿದ್ದಾರೆ. ಯಾವುದೇ ಅಡೆಚಣೆ ಇಲ್ಲದೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯುತ್ತದೆ ಎಂದರು. ಸೋಮವಾರ ಮಧ್ಯಾಹ್ನ ನಂದಿ ಧ್ವಜ ಪೂಜೆ ಬಳಿಕ ಅರಮನೆಯಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಗಲಿದೆ. ಈ ಬಾರಿ ಅಂಬಾರಿ ಹೊರುವ ಅಭಿಮನ್ಯು ಜೊತೆಗೆ ಕೇವಲ 2 ಸ್ಥಬ್ಧಚಿತ್ರಗಳು ಸಾಗಲಿವೆ.
from India & World News in Kannada | VK Polls https://ift.tt/31IzTEC