
ಬೆಂಗಳೂರು: ಅಕ್ಟೋಬರ್ 2 . ರಾಷ್ಟ್ರಪಿತ ಮಹಾತ್ಮ ಗಾಂಧೀಯ ಚಿಂತನೆ ಹಾಗೂ ಬೋಧನೆಯನ್ನು ಈ ದಿನದಂದು ಗಣ್ಯರು, ರಾಜಕಾರಣಿಗಳು ನೆನಪಿಸಿಕೊಂಡಿದ್ದಾರೆ. ಅಲ್ಲದೆ ಮಹಾತ್ಮನ ಜನ್ಮದಿನಕ್ಕೆ ಶುಭಕೋರಿದ್ದಾರೆ. 'ಸತ್ಯ, ಅಹಿಂಸೆಗಳ ಬೆಳಕಿನಲ್ಲಿ ಸತ್ಯಾಗ್ರಹದ ದಾರಿಯಲ್ಲಿ ನಡೆದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜಯಂತಿಯಂದು ಅವರಿಗೆ ನಮ್ಮ ಅನಂತ ನಮನಗಳನ್ನು ಸಲ್ಲಿಸೋಣ’ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭಕೋರಿದ್ದಾರೆ. ಸತ್ಯ, ಅಹಿಂಸೆ, ನೈತಿಕತೆ ಮತ್ತು ಸರಳತೆಯ ಹಾದಿ ಸುಗಮ ಅಲ್ಲ, ಮಹಾತ್ಮಗಾಂಧೀಜಿಯವರು ಆ ಹಾದಿಯಲ್ಲಿ ನಡೆದು ಗುರಿ ಮುಟ್ಟಬಹುದೆಂದು ತೋರಿಸಿಕೊಟ್ಟಿದ್ದಾರೆ. ನಾವೂ ಗಾಂಧಿ ಮಾರ್ಗದ ಪಥಿಕರಾಗೋಣ ಎಂದು ಗಾಂಧಿ ಜಯಂತಿಯ ಸಂದರ್ಭದಲ್ಲಿ ಶಪಥ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗಕೆ ಹೊಸ ಹೊಳಹು ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರಳ ವ್ಯಕ್ತಿತ್ವ, ದೃಢ ನಿರ್ಧಾರದ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜನ್ಮ ದಿನದ ಶುಭಾಶಯಗಳು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ದಂಡಿ ಸತ್ಯಾಗ್ರಹ, ಕ್ವಿಟ್ ಇಂಡಿಯಾ, ಸ್ವದೇಶಿ ಚಳುವಳಿಯಂತಹ ಅನೇಕ ಹೋರಾಟಗಳ ರೂವಾರಿ, ಜೀವನದಲ್ಲಿ ಸತ್ಯ, ಅಹಿಂಸೆ, ಸ್ವಚ್ಛತೆಯ ಮಹತ್ವವನ್ನು ಸಾರಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಶತ ನಮನಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
from India & World News in Kannada | VK Polls https://ift.tt/2SinMZD