ಕಲುಷಿತ ನೀರು ಸೇವನೆ ಶಂಕೆ: ಕೊಳ್ಳೇಗಾಲದಲ್ಲಿ ಏಳು ಮಂದಿ ದಿಢೀರ್‌ ಅಸ್ವಸ್ಥ!

ಕೊಳ್ಳೇಗಾಲ: ಪಟ್ಟಣದ ಆಶ್ರಯ ಬಡಾವಣೆಯಲ್ಲಿ ಮಂಗಳವಾರ ಏಳು ಮಂದಿ ಏಕಾಏಕಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರಸಭೆ ವ್ಯಾಪ್ತಿಯ 22ನೇ ವಾರ್ಡ್‌ಗೆ ಒಳಪಟ್ಟಿರುವ ಆಶ್ರಯ ಬಡಾವಣೆಗೆ ಪೂರೈಕೆಯಾಗಿದ್ದು, ಇದನ್ನು ಸೇವಿಸಿದ ಮಂದಿ ಅಸ್ವಸ್ಥರಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಏಳು ಮಂದಿಯಲ್ಲಿ ವಾಂತಿ ಹಾಗೂ ಭೇದಿ ಲಕ್ಷಣಗಳು ಕಂಡು ಬಂದಿದೆ. ಅಸ್ವಸ್ಥಗೊಂಡಿರುವ ಪೈಕಿ ಇಬ್ಬರು ಮಕ್ಕಳು ಹಾಗೂ ಮಹಿಳೆಯೊಬ್ಬರಿದ್ದಾರೆ. ಮಹಿಳೆ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇನ್ನುಳಿದವರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಶ್ರಯ ಬಡಾವಣೆಯಲ್ಲಿ ಇದೀಗ ಆತಂಕ ಮನೆ ಮಾಡಿದೆ. ನೀರು ಸೇವಿಸಲು ನಿವಾಸಿಗಳು ಹಿಂದೇಟು ಹಾಕುವ ಪರಿಸ್ಥಿತಿ ತಲೆದೋರಿದೆ. ಈ ವಿಚಾರ ತಿಳಿಯುತ್ತಲೇ ನಗರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಬಡಾವಣೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ ಬಡಾವಣೆಯಲ್ಲಿನ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳ ಆರೋಗ್ಯ ತಪಾಸಣೆ ನಡೆಸಿದರು. ಅಲ್ಲದೇ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು, ಬಡಾವಣೆ ಸ್ವಚ್ಛತೆಗೆ ಕ್ರಮ ವಹಿಸಲಾಗಿದೆ ಎಂದು ಆಯುಕ್ತ ನಾಗಶೆಟ್ಟಿ ತಿಳಿಸಿದ್ದಾರೆ. ಆರೋಗ್ಯಾಧಿಕಾರಿ ಡಾ.ಪ್ರಕಾಶ್‌, ಡಾ.ನಾಗೇಂದ್ರ, ನಗರಸಭೆ ಪರಿಸರ ವಿಭಾಗದ ಧನಂಜಯ, ಎಂಜಿನಿಯರ್‌ ಅಲ್ತಾಫ್‌, ಸಿದ್ದಪ್ಪ ಇತರರು ಹಾಜರಿದ್ದರು.


from India & World News in Kannada | VK Polls https://ift.tt/3oBs9Oe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...