
ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಯಾರಿಗೆ ಎಂಬುವುದು ಇನ್ನು ಅಧಿಕೃತಗೊಂಡಿಲ್ಲ. ಸದ್ಯ ಇಬ್ಬರ ಹೆಸರನ್ನು ರಾಜ್ಯ ಮುಖಂಡರು ಹೈಕಮಾಂಡ್‌ಗೆ ಕಳಿಸಿಕೊಟ್ಟಿದ್ದಾರೆ. ಆದರೆ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಗೊಂದಲ ಇಲ್ಲ ಎನ್ನುತ್ತಾರೆ ಸಚಿವ ಎಸ್‌ಟಿ ಸೋಮಶೇಖರ್. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ನಾವು ಮನವಿ ಮಾಡಿದ್ದೇವೆ ಎಂದರು. ಟಿಕೆಟ್ ಯಾರಿಗೆ ನೀಡಬೇಕು ಎಂದು ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಎರಡು ಅಭ್ಯರ್ಥಿಗಳ ಹೆಸರು ಕೇಳಿಬರುವುದು ಸಹಜ. ಹಿಂದಿನ ಪರಾಜಿತ ಅಭ್ಯರ್ಥಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಪಕ್ಷದಲ್ಲಿ ತೀರ್ಮಾನವಾಗುತ್ತದೆ ಎಂದು ತಿಳಿಸಿದರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಮುನಿರತ್ನ ಹಾಗೂ ತುಳಸಿ ಮುನಿರಾಜು ಗೌಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಇಬ್ಬರ ಹೆಸರನ್ನು ಹೈಕಮಾಂಡ್‌ಗೆ ಕಳಿಸಲಾಗಿದ್ದು ಅಂತಿಮ ನಿರ್ಧಾರ ದೆಹಲಿ ಮಟ್ಟದಲ್ಲಿ ನಡೆಯಲಿದೆ ಎನ್ನಲಾಗಿದೆ.
from India & World News in Kannada | VK Polls https://ift.tt/2GiiICb