ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ಗೆ ಕೊರೊನಾ ಪಾಸಿಟಿವ್‌ ದೃಢ..!

ಮುಂಬೈ: ಸಾಂಕ್ರಾಮಿಕ ಕಾಯಿಲೆ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ.ಇತ್ತೀಚೆಗೆ ಜನಸಾಮಾನ್ಯರ ಜೊತೆ ಜನಪ್ರತಿನಿಧಿಗಳಿಗೂ ಕೂಡ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಅನೇಕ ಜನ ರಾಜಕಾರಣಿಗಳು ಕೊರೊನಾಗೆ ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅವರಿಗೂ ಕೂಡ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಕಳೆದ ಹಲವು ದಿನಗಳಿಂದ ಜನರ ಸಂಪರ್ಕದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಅವರಿಗೆ ಕೊರೊನಾ ಕಾಣಿಸಿಕೊಂಡಿರುವುದರಿಂದ ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಆತಂಕ ಭೀತಿ ಸೃಷ್ಟಿಯಾಗಿದೆ. ಇದೀಗ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಪರಿಣಾಮ ಅಜಿತ್ ಪವಾರ್ ಅವರು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಜಿತ್ ಪವಾರ್, ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಅಲ್ಲದೇ ನಾನು ಆರೋಗ್ಯವಾಗಿಯೂ ಇದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಕಳೆದ ಕೆಲತಿಂಗಳಿನಿಂದ ರಾಜಕಾರಣಿಗಳಲ್ಲೂ ಕೂಡ ಹೆಚ್ಚಾಗಿ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಅನೇಕ ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೀಗ ಅಜಿತ್ ಪವಾರ್ ಅವರಿಗೆ ಕೊರೊನಾ ಕಾಣಿಸಿಕೊಂಡಿರೋದು ಅವರ ಸಂಪರ್ಕದಲ್ಲಿದವರಿಗೆ ಆತಂಕವನ್ನುಂಟು ಮಾಡಿದೆ.


from India & World News in Kannada | VK Polls https://ift.tt/37ISeVU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...