ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ; ವಿಜಯಘಾಟ್‌ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ ಮತ್ತು ಪ್ರಧಾನಿ

ಹೊಸದಿಲ್ಲಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನಾಚರಣೆಯನ್ನು ದೇಶದೆಲ್ಲೆಡೆ ಆಚರಿಸಲಾಗ್ತಿದೆ. ಈ ಹಿನ್ನೆಲೆ ಪ್ರಧಾನಿ ಹಾಗೂ ರಾಷ್ಟ್ರಪತಿ ರಾಮನಾಥ್ ಅವರು ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕ ವಿಜಯ ಘಾಟ್‌ಗೆ ತೆರಳಿ ಸಮಾಧಿಗೆ ಗೌರವ ವಂದನೆ ಸಲ್ಲಿಸಿದರು. ಈ ವೇಳೆ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುತ್ರರಾದ ಸುನಿಲ್ ಶಾಸ್ತ್ರಿ, ಅನಿಲ್ ಶಾಸ್ತ್ರಿ ಹಾಗೂ ಕುಟುಂಬದ ಇತರೇ ಸದಸ್ಯರು ಉಪಸ್ಥಿತರಿದ್ದು, ಶಾಸ್ತ್ರಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನಾಚರಣೆ ಹಿನ್ನೆಲೆ ಟ್ವೀಟ್ ಮಾಡಿ ಅವರನ್ನು ಸ್ಮರಿಸಿರುವ ಪ್ರಧಾನಿ ಮೋದಿ, ಶಾಸ್ತ್ರಿಯವರದ್ದು ವಿನಮ್ರವಾದ ವ್ಯಕ್ತಿತ್ವವಾಗಿತ್ತು. ಸರಳತೆಯನ್ನು ಪ್ರತಿಪಾದಿಸುತ್ತಿದ್ದ ಅವರು ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದರು. ಅವರು ದೇಶಕ್ಕಾಗಿ ಮಾಡಿದ ಎಲ್ಲಾ ಕಾರ್ಯಗಳನ್ನು ವಿನಮ್ರವಾಗಿ ನೆನೆಯುತ್ತಾ ಜನ್ಮದಿನದ ಶುಭಾಷಯಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ. ಇನ್ನು ರಾ‍ಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮಾಡಿ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸ್ಮರಿಸಿದ್ದು, ಭಾರತದ ಮಹಾನ್ ಪುತ್ರ, ಶಾಸ್ತ್ರಿಯವರು ನಮ್ಮ ದೇಶಕ್ಕೆ ಅಸಾಧಾರಣ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದರು. ಹಸಿರು ಕ್ರಾಂತಿ, ಶ್ವೇತ ಕ್ರಾಂತಿ ಮತ್ತು ಯುದ್ಧ ಕಾಲದಲ್ಲಿ ಅವರ ನಾಯಕತ್ವವು ದೇಶಕ್ಕೆ ಪ್ರೇರಣಾದಾಯಕವಾಗಿದೆ ಎಂದು ಕೊಂಡಾಡಿದ್ದಾರೆ.


from India & World News in Kannada | VK Polls https://ift.tt/3ijWX1L

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...