ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದ ಸಿದ್ದರಾಮಯ್ಯ

ಕಲಬುರಗಿ: ಪೀಡಿತ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಭಾನುವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಪ್ರವಾಹದಿಂದ ಬೆಳೆ ಕಳೆದುಕೊಂಡಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ ಪಾಟೀಲ್, ರಹೀಂಖಾನ್, ವಿಧಾನಸಭೆ ವಿರೋಧ ಪಕ್ಷದ ಸಚೇತಕರಾದ ಡಾ. ಅಜಯಸಿಂಗ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಶರಣಪ್ಪ ಮಟ್ಟೂರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರವಾಹದಿಂದ ಈ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರ ಸಂತ್ರಸ್ತರಿಗೆ ನಯಾ ಪೈಸೆ ಪರಿಹಾರ ನೀಡಿಲ್ಲ. ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಅವರ ಸಿದ್ದರಾಮಯ್ಯಗಿಂತ ನಮಗೆ ಧಮ್ ಹೆಚ್ಚಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಧಮ್ ಇದ್ರೆ ಪ್ರಧಾನಿ ನರೇಂದ್ರ ಮೋದಿ ಬಳಿ ಹೋಗಿ ಪರಿಹಾರ ಕೇಳಲಿ. ರಾಜ್ಯದಲ್ಲಿ 25 ಸಂಸದರಿದ್ದರೂ ಯಾವುದೇ ಪ್ರಯೋಜನೆ ಇಲ್ಲ, ಪ್ರಧಾನಿ ಬಳಿ ತೆರಳಿ ಪರಿಹಾರ ಕೇಳುವ ಧೈರ್ಯ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಸರ್ವ ಪಕ್ಷಗಳ ನಿಯೋಗ ಕರೆದೊಯ್ಯಲಿ, ಪ್ರಧಾನಿ ಬಳಿ ನಾವೇ ಪರಿಹಾರ ಕೇಳುತ್ತೇವೆ ಎಂದರು.


from India & World News in Kannada | VK Polls https://ift.tt/2HAcpKN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...