ರೋಹಿಣಿ ಸಿಂಧೂರಿ ವಿರುದ್ಧ ಬಹುಕೋಟಿ ಹಣ ದುರ್ಬಳಕೆ ಆರೋಪ, ದಾಖಲೆ ನೀಡಿದ ಸಾ.ರಾ. ಮಹೇಶ್

ಮೈಸೂರು: ಜಿಲ್ಲಾಧಿಕಾರಿ ಬಹುಕೋಟಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಶಾಸಕ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ದಾಖಲೆ ಬಿಡುಗಡೆ ಮಾಡಿದ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದಾಗ ಆಂಧ್ರಪ್ರದೇಶದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ, ಮೂಲಸೌಕರ್ಯ ಕಲ್ಪಿಸುವುದು ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಅದರ ಆಧಾರದ ಮೇಲೆ 2020ರ ಜೂನ್ 30ರಂದು ಸರ್ಕಾರ ಆದೇಶ ಮಾಡಿದೆ. 200 ಕೋಟಿ ರೂ. ಕಾಮಗಾರಿಯ ನಿರ್ಮಾಣ, ನಿರ್ವಹಣೆಯನ್ನು ಟಿಟಿಡಿಗೆ ವಹಿಸಿದೆ. ಆರ್ಕಿಟೆಕ್ಚರ್, ಲ್ಯಾಂಡ್ ಸ್ಕೇಪಿಂಗ್ ಮತ್ತು ಇಂಟೀರಿಯರ್ ವಿನ್ಯಾಸದ ಕೆಲಸವನ್ನು ಮೆ.ಗಾಯತ್ರಿ ಆಂಡ್ ನಮಿತ್ ಆರ್ಕಿಟೆಕ್ಟ್ಸ್ ಅವರಿಗೆ ನೀಡಲಾಗಿದೆ. ಇದಕ್ಕಾಗಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ 1999ರಡಿ ವಿನಾಯಿತಿ ಕೂಡ ನೀಡಲಾಗಿದೆ. ಅಂದ್ರೆ 10 ಕೋಟಿ ರೂ. ನೀಡಲಾಗಿದೆ ಎಂದು ದೂರಿದ್ದಾರೆ. ನಮ್ಮ ಸರ್ಕಾರದಲ್ಲಿ ಆರ್ಕಿಟೆಕ್ಟ್, ವಿನ್ಯಾಸಗಾರರೇ ಇಲ್ಲವೇ? ಭೂಮಿ ನಮ್ಮದು, ಹಣ ನಮ್ಮದು, ಆದರೆ ಕಾಮಗಾರಿ ಆ ರಾಜ್ಯದ ಸಂಸ್ಥೆಗೆ ಯಾಕೆ...? ಎಂದು ಪ್ರಶ್ನಿಸಿರುವ ಸಾ.ರಾ ಮಹೇಶ್, ನಮ್ಮ ಲೋಕೋಪಯೋಗಿ ಇಲಾಖೆ ಕೆಲಸ ಮಾಡುತ್ತಿರಲಿಲ್ವ. ನಮ್ಮಲ್ಲಿ ಆರ್ಕಿಟೆಕ್ಟ್‌ಗಳು ಇರಲಿಲ್ವಾ ಎಂದಿದ್ದಾರೆ. ಈ ವಿಚಾರವನ್ನು ಕೆಲವರು ಗಿಫ್ಟ್ ಅಂತ ಹೇಳುತ್ತಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಶಾಸಕ ಸಾರಾ ಮಹೇಶ್ ಒತ್ತಾಯಿಸಿದ್ದಾರೆ. ಅವರು ಸದರಿ ಕಾಮಗಾರಿಯನ್ನು ರಾಜ್ಯದ ಲೋಕೋಪಯೋಗಿ ಇಲಾಖೆಗೆ ವಹಿಸಬಹುದಿತ್ತು. ಆದರೆ ಎಲ್ಲವನ್ನೂ ಟಿಟಿಡಿ ಮೇಲ್ವಿಚಾರಣೆ ಮೂಲಕ ಆಂಧ್ರಪ್ರದೇಶದ ಖಾಸಗಿ ಸಂಸ್ಥೆಗೆ ರೋಹಿಣಿ ಸಿಂಧೂರಿ ಅನುಕೂಲ ಮಾಡಿಕೊಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ಅದರ ಪ್ರತಿಫಲವಾಗಿ ರೋಹಿಣಿ ಸಿಂಧೂರಿಯವರಿಗೆ ಮೈಸೂರು ಜಿಲ್ಲಾಧಿಕಾರಿ ಸ್ಥಾನ ಗಿಫ್ಟ್ ನಂತೆ ಸಿಕ್ಕಿದೆ ಎಂದು ಹೇಳಿದ್ದಾರೆ.


from India & World News in Kannada | VK Polls https://ift.tt/2Siz2VK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...