ಬೆಂಗಳೂರು: ಅಕ್ಟೋಬರ್ 28 ರಂದು ನಡೆಯಲಿರುವ ವಿಧಾನಪರಿಷತ್ ನಾಲ್ಕು ಸ್ಥಾನಗಳ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶನಿವಾರ ರಾತ್ರಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿದೆ. ಎರಡು ಶಿಕ್ಷಕರ ಕ್ಷೇತ್ರಗಳು ಹಾಗೂ ಎರಡು ಪದವೀಧರರ ಕ್ಷೇತ್ರಗಳು ಸೇರಿದಂತೆ ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದ ಗೌಡ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರ್ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಇನ್ನು ಜೆಡಿಎಸ್ ಕೂಡಾ ಈ ನಾಲ್ಕು ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ. ರಂಗನಾಥ್,ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಎಸ್ ಪುರ್ಲೆ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಆಕ್ಟೋಬರ್ 28 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಲ್ಲ. ಕೆಲ ದಿನಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ರಮೇಶ್ ಬಾಬು ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
from India & World News in Kannada | VK Polls https://ift.tt/3laB0Eb