ರಾಮನಗರದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ಆರ್ಥಿಕ ನೆರವು

ರಾಮನಗರ: ಕೊರೊನಾ ಸಮಯದಲ್ಲಿ ಬೀದಿ ಬದಿಯ ವ್ಯಾಪಾರಿಗಳು ಸಹ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ಬ್ಯಾಂಕ್‌ ವತಿಯಿಂದ 10 ಸಾವಿರ ರೂ. ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ನಂದಕುಮಾರ್‌ ಹೇಳಿದ್ದಾರೆ. ನಗರದ ಎಸ್‌ಬಿಐ ಬ್ಯಾಂಕ್‌ ಶಾಖೆಯ ಆವರಣದಲ್ಲಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಸ್ವಾವಲಂಬಿ ನಿಧಿ ಯೋಜನೆಯಡಿ ಸಣ್ಣ ಬೀದಿ ವ್ಯಾಪಾರಿಗಳಿಗೆ ಸಾಲ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಯೋಜನೆ ಸದ್ಬಳಕೆ ಮಾಡಿಕೊಳ್ಳಿ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಎಸ್‌ಬಿಐ ಬ್ಯಾಂಕ್‌ ವತಿಯಿಂದ ಸಾಲ ನೀಡಲಾಗುತ್ತಿದೆ. ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಯೋಜನೆ ಕುರಿತು ಈಗಾಗಲೇ ಬ್ಯಾಂಕ್‌ ಸಿಬ್ಬಂದಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಇದನ್ನು ನೇರವಾಗಿ ಬೀದಿ ಬದಿ ವರ್ತಕರಿಗೆ ನೀಡಲಾಗುತ್ತಿದೆ. ಯೋಜನೆಯನ್ನು ಉಪಯೋಗಿಸಿಕೊಂಡು ಸಮಯದ ಸರಿಯಾಕ್ಕೆ ಸಾಲ ಮರು ಪಾವತಿ ಮಾಡಬೇಕು. ಯೋಜನೆಯಿಂದಾಗಿ ಎಲ್ಲಾ ವರ್ಗದ ವ್ಯಾಪಾರಿಗಳಿಗೆ ಅನುಕೂಲವಿದೆ ಎಂದು ಹೇಳಿದರು. ಮರು ಪಾವತಿ ಬಗ್ಗೆ ಕಾಳಜಿ ಇರಲಿ ಮಂಡ್ಯ ಕ್ಷೇತ್ರೀಯ ಕಾರ್ಯಾಲಯದ ಪ್ರಬಂಧಕಿ ಸಂಧ್ಯಾ ಎ.ಕೆ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಬ್ಯಾಂಕ್‌ಗಳು ಶ್ರಮ ಹಾಕುತ್ತಿದೆ. ಸಾಲವನ್ನು ಸದ್ಬಳಕೆ ಮಾಡಿಕೊಂಡು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಬೇಕು. ಇದರಿಂದಾಗಿ ಫಲಾನುಭವಿಗಳಿಗೆ ಅಧಿಕ ಪ್ರಮಾಣದಲ್ಲಿ ಸಾಲ ನೀಡಲು ಸಹಾಯವಾಗುತ್ತದೆ ಎಂದು ಹೇಳಿದರು. ಅಡಚಣೆ ನಿವಾರಣೆ ಸಾಲ ಸೌಲಭ್ಯ ಯೋಜನೆ ರೂಪಿಸುವ ಸಂದರ್ಭದಲ್ಲಿ ಶಾಖಾ ಸಿಬ್ಬಂದಿಗಳಿಗೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಕೇವಲ ಎರಡನೇ ದಿನದ ಅಂತರದಲ್ಲಿ ಎಲ್ಲಾ ಸಮಸ್ಯೆಗಳನ್ನು ನಿಭಾಯಿಸಿ ಯೋಜನೆ ಮುಂದುವರೆಸಿಕೊಂಡು ಹೋಗಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆ ಶ್ಲಾಘನೀಯ ಎಂದು ಹೇಳಿದರು. ಅಭಿವೃದ್ಧಿಗೆ ಅವಕಾಶವಿದೆ ನಾವು ಬೆಳೆಯಬೇಕು ಎಂಬ ಆಶಯ ಇದ್ದರೇ, ಬ್ಯಾಂಕ್‌ ಜತೆಗೆ ಸಂಪರ್ಕ ಇಟ್ಟುಕೊಳ್ಳಬೇಕು. ಉದ್ದೇಶ ಚೆನ್ನಾಗಿದ್ದರೇ, ಕಡಿಮೆ ಸಮಯದಲ್ಲಿಯೇ ಅಭಿವೃದ್ಧಿಯಾಗಲು ಅವಕಾಶವಿದೆ. ಸಾಲ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನೀಡಿರುವ 10ಸಾವಿರ ಸಾಲಕ್ಕೆ ಕಡಿಮೆ ಬಡ್ಡಿ ವಿಧಿಸಲಾಗಿದೆ. ನಿಗದಿತ ಸಮಯಕ್ಕೆ ಮರು ಪಾವತಿ ಮಾಡಿದ್ದೇ ಆದಲ್ಲಿ, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ಸಾಲ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕಡಿಮೆ ಬಡ್ಡಿದರರಾಮನಗರ ಎಸ್‌ಬಿಐ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕಿ ಪ್ರತಿಭಾ ಮಾತನಾಡಿ, ವರ್ತಕರು ಸಾಲ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಬೇಕು. ಕಡಿಮೆ ಬಡ್ಡಿ ದರಕ್ಕೆ ಸಾಲ ವಿತರಣೆ ಮಾಡಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಈ ವೇಳೆ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ಮಧಸೂಧನ್‌ ರೆಡ್ಡಿ ಮಾತನಾಡಿದರು. ಈ ವೇಳೆ ಮಂಡ್ಯ ಕ್ಷೇತ್ರೀಯ ಕಾರ್ಯಲಯದ ಋುಣ ವಿಭಾಗದ ಮುಖ್ಯವ್ಯವಸ್ಥಾಪಕ ಮಂಜುನಾಥ್‌ ಕುಲಕರ್ಣಿ, ಬ್ಯಾಂಕ್‌ ಸಿಬ್ಬಂದಿ ಪುರುಷೋತ್ತಮ, ಆನಂದ್‌ ಬಾಬು, ಮೋಹನ್‌ ಕುಮಾರ್‌, ರಶ್ಮಿ, ನಗರಸಭೆ ಸಿಬ್ಬಂದಿ ನಟರಾಜು ಹಾಜರಿದ್ದರು.


from India & World News in Kannada | VK Polls https://ift.tt/3786J3E

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...