ಬಾಳೆಹೊನ್ನೂರು: ಪಟ್ಟಣದಲ್ಲಿ ಡಿ.1ರಂದು ಶೃಂಗೇರಿ ಮತ್ತು ಮೂಡಿಗೆರೆ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಅವರು ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಬಿಲ್ಲವ ಸಂಘದಲ್ಲಿ ಗುರುವಾರ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಚಿವರು ಮೊದಲು ಶ್ರೀರಂಭಾಪುರಿ ಜಗದ್ಗುರುಗಳ ದರ್ಶನ ಪಡೆಯಲಿದ್ದು, ಬಳಿಕ ಸಭೆಯಲ್ಲಿ ಕಾರ್ಯಕರ್ತರನ್ನದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್, ಬಿಜೆಪಿ ವಿಭಾಗೀಯ ಪ್ರಭಾರಿ ಗಿರೀಶ್ ಪಟೇಲ್, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ್ ರಾವ್, ಜಿಲ್ಲಾಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜ್ ಶೆಟ್ಟಿ, ರಾಮಕೃಷ್ಣ ಅಂಬ್ಲೂರು, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವೆನಿಲ್ಲಾ ಭಾಸ್ಕರ್, ನ.ರಾ.ಪುರ ಮಂಡಲ ಅಧ್ಯಕ್ಷ ಅರುಣ್ ಕುಮಾರ್, ಮೂಡಿಗೆರೆ ಮಂಡಲ ಅಧ್ಯಕ್ಷ ಜನ್ನಾಪುರ ರಘು ಮತ್ತಿತರರು ಪಾಲ್ಗೊಂಡಿದ್ದರು. ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಅಜ್ಜಂಪುರ (ಚಿಕ್ಕಮಗಳೂರು): ಪಟ್ಟಣ ಸಮೀಪದ ಕಾಟಿಗನೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಶಿವಪ್ರಸಾದ್ ಅವರ ಸಸ್ಯ ಸಂಜೀವಿನಿ ಸಾವಯವ ಗೊಬ್ಬರ ತಯಾರಿಕಾ ಘಟಕಕ್ಕೆ ಚಿರತೆ ಬುಧವಾರ ಮಧ್ಯರಾತ್ರಿ ನುಗ್ಗಿದೆ. ದೈತ್ಯ ಚಿರತೆ ಅಲ್ಲಿದ್ದ ನಾಯಿಯನ್ನು ಕಚ್ಚಿ ಹೊತ್ತೊಯ್ದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿದಾಖಲಾಗಿದೆ. ಈ ಭಾಗದಲ್ಲಿಇದೇ ಚಿರತೆ ಆಗಾಗ್ಗೆ ಜನರಿಗೆ ಕಂಡುಬರುತ್ತಿದ್ದು, ಇದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಚಿರತೆ ಇರುವುದಕ್ಕೆ ಸೂಕ್ತ ದಾಖಲೆ ನೀಡಿದ್ದಲ್ಲಿ ಬೋನ್ ಇರಿಸಿ ಅದನ್ನು ಹಿಡಿಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಮನುಷ್ಯರು, ಪ್ರಾಣಿಗಳ ಪ್ರಾಣಹಾನಿ ಆಗುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿದು ನೆಮ್ಮದಿ ಕಾಪಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
from India & World News in Kannada | VK Polls https://ift.tt/2JiSJvo