ಕಾಲೇಜು ಪುನಾರಂಭ: ದ.ಕ.ದಲ್ಲಿ 29 ವಿದ್ಯಾರ್ಥಿಗಳಿಗೆ ಕೊರೊನಾ!

ಮಂಗಳೂರು: ಕಾಲೇಜುಗಳು ಆರಂಭವಾಗಿ ವಾರವಾಗಿದ್ದು, ದ.ಕ.ದಲ್ಲಿ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ. ಇದರಲ್ಲಿ ಹೊರ ರಾಜ್ಯದ ವಿದ್ಯಾರ್ಥಿಗಳೂ ಸೇರಿದ್ದಾರೆ. ಮಂಗಳೂರಿನಲ್ಲಿ 16, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1, ಬಂಟ್ವಾಳದಲ್ಲಿ 7, ಪುತ್ತೂರಿನಲ್ಲಿ ಒಬ್ಬ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ಮಂಗಳೂರಿನ ಕೆಎಂಸಿಯಲ್ಲಿ ಕಲಿಯುವ ಹೊರ ರಾಜ್ಯದಿಂದ ಮಂಗಳೂರಿಗೆ ಬಂದ 6 ವಿದ್ಯಾರ್ಥಿಗಳಲ್ಲೂ ಕೊರೊನಾ ಪಾಸಿಟಿವ್‌ ಪತ್ತೆಯಾಗಿದೆ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಅದರ ವರದಿ ಸಿಗುವಾಗ ವಿಳಂಬವಾಗಿದೆ. ಶನಿವಾರ ರಾತ್ರಿವರೆಗೆ 16,441 ವಿದ್ಯಾರ್ಥಿಗಳ ಕೋವಿಡ್‌ ತಪಾಸಣೆ ಪರೀಕ್ಷೆ ನಡೆಸಿದ್ದು, 29 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ 8 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, 8 ಖಾಸಗಿ ಹಾಗೂ ಒಂದು ಸರಕಾರಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಭಾನುವಾರ ಕೋವಿಡ್‌ ಪರೀಕ್ಷೆ ನಿಧಾನಗತಿಯಲ್ಲಿ ಸಾಗಿದೆ. ಸೋಮವಾರದ ಬಳಿಕ ಮತ್ತೆ ಚುರುಕಾಗಲಿದೆ ಎಂದು ತಿಳಿಸಿದ್ದಾರೆ.


from India & World News in Kannada | VK Polls https://ift.tt/3kPLtV2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...