ಚಿತ್ರದುರ್ಗ: ಕೊರೊನಾ ಲಸಿಕೆಗಾಗಿ ಪ್ರಾದೇಶಿಕ ಕೋಲ್ಡ್‌ ಸ್ಟೋರೇಜ್‌ ಕೇಂದ್ರ ತೆರೆದ ಜಿಲ್ಲಾಡಳಿತ, 36 ಲಕ್ಷ ಡೋಸ್‌ ಸಂಗ್ರಹಕ್ಕೆ ವ್ಯವಸ್ಥೆ!

ಚಿತ್ರದುರ್ಗ: ಕೊರೊನಾ ಲಸಿಕೆಗೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು ಲಸಿಕೆಯನ್ನು ವ್ಯವಸ್ಥಿತವಾಗಿ ಸರಬರಾಜು ಮಾಡುವುದರ ಜತೆಗೆ ಯಾವುದೇ ತೊಂದರೆಯಾಗದಂತೆ ವಿತರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಆಯೋಜಿಸಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಲಸಿಕೆಯನ್ನು ವೈಜ್ಞಾನಿಕ ಹಾಗೂ ಸುರಕ್ಷಿತವಾಗಿ ಸಂಗ್ರಹಿಸಿಡಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಪಂ ಮಟ್ಟದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಆ ಕಾರ್ಯಕ್ರಮದಲ್ಲಿ ಕೊರೊನಾ ಸೋಂಕಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪಿಡಿಒಗಳು ಕ್ರಮವಹಿಸಲು ಸೂಚಿಸಬೇಕು ಎಂದು ಜಿಪಂ ಸಿಇಒಗೆ ತಿಳಿಸಿದರು. ಆರ್‌ಸಿಎಚ್‌ ಅಧಿಕಾರಿ ಡಾ.ಕುಮಾರಸ್ವಾಮಿ ಮಾತನಾಡಿ, ಹಾಗೂ ವಿತರಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ. ಲಸಿಕೆ ಸಂಗ್ರಹಿಸಿಡಲು ಜಿಲ್ಲೆಯಲ್ಲಿ ಪ್ರಾದೇಶಿಕ ದಾಸ್ತಾನು ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಕೋಲ್ಡ್‌ ಸ್ಟೋರೇಜ್‌ ಕೇಂದ್ರ ತೆರೆಯಲಾಗಿದ್ದು, ಈ ಕೇಂದ್ರದಿಂದ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ ಹಾಗೂ ಜಿಲ್ಲೆಗಳಿಗೆ ಲಸಿಕೆ ಪೂರೈಕೆಯಾಗಲಿದೆ. 36 ಲಕ್ಷಕ್ಕೂ ಅಧಿಕ ಡೋಸ್‌ಗಳನ್ನು ಸಂಗ್ರಹಿಸಿಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಜಿಪಂ ಸಿಇಒ ಟಿ.ಯೋಗೇಶ್‌, ಅಡಿಶನಲ್‌ ಎಸ್ಪಿ ನಂದಗಾವಿ, ಉಪ ವಿಭಾಗಾಧಿಕಾರಿ ಪ್ರಸನ್ನ, ಜಿಲ್ಲಾಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್‌, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಎಚ್‌.ಜೆ. ಬಸವರಾಜ್‌, ಜಿಲ್ಲಾನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ಸತೀಶ್‌ರೆಡ್ಡಿ, ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು ಸೇರಿದಂತೆ ಮತ್ತಿತರರಿದ್ದರು. ಇನ್ನು ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ತೆರೆಯಲಾಗಿರುವ ಪ್ರಾದೇಶಿಕ ಕೋಲ್ಡ್‌ ಸ್ಟೋರೇಜ್‌ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಹಾಗೂ ಜಿಪಂ ಸಿಇಒ ಟಿ.ಯೋಗೇಶ ಭೇಟಿ ನೀಡಿ ಪರಿಶೀಲಿಸಿದರು.


from India & World News in Kannada | VK Polls https://ift.tt/2Vdch7n

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...