ಅಕ್ರಮ ಗಣಿಗಾರಿಕೆಗಾಗಿ 9 ಸಾವಿರ ಮರಗಳ ನಾಶ; ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಜಿಲ್ಲೆ ಮಾಲೂರು ತಾಲೂಕಿನ ಗುಂಡೇನಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆಗಾಗಿ ಬೆಟ್ಟದಲ್ಲಿದ್ದ 9 ಸಾವಿರಕ್ಕೂ ಅಧಿಕ ಮರಗಳನ್ನು ನಾಶಗೊಳಿಸಲಾಗಿದೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ತಪ್ಪಿತಸ್ಥರಿಂದ ದಂಡ ಮೊತ್ತ ವಸೂಲು ಮಾಡುವ ಬಗ್ಗೆ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ. ಕುರಿತು ಸ್ಥಳೀಯ ನಿವಾಸಿಗಳಾದ ರವೀಂದ್ರ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ.ಎಸ್‌. ಓಕ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ, ಡಿ.10ರೊಳಗೆ ವರದಿ ಸಲ್ಲಿಸಲು ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಸರಕಾರಿ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡು ವಂತೆ ಕೋರಿದರು. ಅದಕ್ಕೆ ನ್ಯಾಯಪೀಠ, ಆಕ್ಷೇಪಣೆ ಜತೆಗೆ ದಂಡ ವಸೂಲು ಮಾಡಿರುವ ಕುರಿತು ವರದಿ ಸಲ್ಲಿಸಬೇಕು. ವರದಿ ಸಲ್ಲಿಸಲು ಮತ್ತೆ ಕಾಲಾವಕಾಶ ನೀಡುವುದಿಲ್ಲ. ಇದೇ ಕೊನೆಯ ಅವಕಾಶ ಎಂದು ಸ್ಪಷ್ಟಪಡಿಸಿತು. ಇನ್ನೂ ವಸೂಲಿಯಾಗದ ದಂಡ: ಅರ್ಜಿದಾರರ ಪರ ವಕೀಲರು, ಗುಂಡೇನಹಳ್ಳಿ ಬೆಟ್ಟದ 45.16 ಎಕರೆ ಪ್ರದೇಶದಲ್ಲಿ ಅರಣ್ಯ ಇಲಾಖೆ ಮತ್ತು ಬನಹಳ್ಳಿ ಗ್ರಾಮ ಪಂಚಾಯಿತಿ ಜಂಟಿಯಾಗಿ ಮರಗಳನ್ನು ಬೆಳೆಸಿದ್ದವು. ಈ ಜಾಗದಲ್ಲಿಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಕೆಲ ಪ್ರಭಾವಿಗಳು 37 ಎಕರೆ ಪ್ರದೇಶದಲ್ಲಿದ್ದ 9,500ಕ್ಕೂ ಅಧಿಕ ಮರಗಳನ್ನು ಕಡಿದು ಹಾಕಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಿದ ವರಿಗೆ 106 ಕೋಟಿ ರೂ. ದಂಡ ವಿಧಿಸಲಾಗಿದೆ. ಈ ದಂಡದ ಹಣವನ್ನು ಈವರೆಗೂ ವಸೂಲು ಮಾಡಿಲ್ಲ ಎಂದರು. ಅಲ್ಲದೆ, ಇಷ್ಟು ದೊಡ್ಡ ಮೊತ್ತದ ಹಣ ಬಾಕಿ ಇರುವಾಗ ಗಣಿಗಾರಿಕೆ ಗುತ್ತಿಗೆ ಪರವಾನಗಿಗಳನ್ನು ನವೀಕರಿಸಲೂ ಬರುವುದಿಲ್ಲ. ಆದರೂ, ಸರಕಾರ ಗುತ್ತಿಗೆ ಅವಧಿ ನವೀಕರಿಸುವ ಮೂಲಕ ನಿಯಮ ಬಾಹಿರವಾಗಿ ವರ್ತಿಸಿದೆ. ಆದ್ದರಿಂದ, ದಂಡದ ಮೊತ್ತ ವಸೂಲಿ ಮಾಡಲು, ಮರಗಳನ್ನು ನಾಶಪಡಿಸಲು ಕಾರಣರಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


from India & World News in Kannada | VK Polls https://ift.tt/3kWNNJN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...