ಸಂಪುಟ ವಿಸ್ತರಣೆ: ಜೆಪಿ ನಡ್ಡಾ ಜೊತೆ ಮಾತುಕತೆ ನಡೆಸಲಿರುವ ರಮೇಶ್ ಜಾರಕಿಹೊಳಿ!

ಹೊಸದಿಲ್ಲಿ: ಸಂಪುಟ ವಿಸ್ತರಣೆ ಜಂಜಾಟ ತೀವ್ರಗೊಳ್ಳುತ್ತಿದ್ದು ಸಚಿವ ದೆಹಲಿಯತ್ತ ತೆರಳಿದ್ದಾರೆ. ರಮೇಶ್ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿಯನ್ನು ಹಲವು ಬಿಜೆಪಿ ಮುಖಂಡರು ಹಾಗೂ ಸಚಿವಾಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಸಚಿವ ಶ್ರೀರಾಮುಲು, ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌, ಶಶಿಕಲಾ ಜೊಲ್ಲೆ, ಅಣ್ಣಾ ಸಾಹೇಬ ಜೊಲ್ಲೆ ಸೇರಿದಂತೆ ಹಲವರು ಭೇಟಿಯಾಗಿದ್ದಾರೆ. ಈ ಭೇಟಿಯ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ದೆಹಲಿ ವಿಮಾನವನ್ನು ಏರಿದ್ದಾರೆ. ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ಜೆಪಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಜಾರಕಿಹೊಳಿ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಈ ನಡುವೆ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ ಗ್ರೀನ್ ಸಿಗ್ನಲ್ ನೀಡುತ್ತಿಲ್ಲ. ಪದೇ ಪದೇ ವಿಳಂಬ ಆಗುತ್ತಿರುವುದು ಸಚಿವಾಕಾಂಕ್ಷಿಗಳ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.


from India & World News in Kannada | VK Polls https://ift.tt/3l5g5Sr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...