ಸಂತ್ರಸ್ತರಿಗೆ ಕೊಡಬೇಕಾದ ದುಡ್ಡು ಸಿಎಂ ಮತ್ತು ಸಚಿವರ ಜೇಬಿಗೆ ಹೋಯಿತಾ?; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕ ಇದೀಗ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಕಿಡಿಕಾರಿದ್ದಾರೆ. ಕಳೆದ ವರ್ಷ ಸರ್ಕಾರ ನಡೆಸಿದ್ದ ಸಮೀಕ್ಷೆಯಂತೆ ನೆರೆಯಿಂದಾಗಿ ಹಾನಿಗೀಡಾದ ಮನೆಗಳು 2,24,000, ಪರಿಹಾರ ನೀಡಿರುವುದು ಮಾತ್ರ 1,24,000 ಮನೆಗಳಿಗೆ ಎಂದು ಕೇಂದ್ರಕ್ಕೆ ವರದಿ ಕಳಿಸಲಾಗಿದೆ. ಇನ್ನು ಈ ವರ್ಷದ ಮಳೆಗೆ ಹಾನಿಗೀಡಾಗಿರುವ ಮನೆಗಳಿಗೆ ಸರ್ಕಾರ ಪರಿಹಾರ ನೀಡುವುದು ಯಾವಾಗ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಆಗಸ್ಟ್‌ನಿಂದ ಮೂರು ತಿಂಗಳು ಸುರಿದ ಮಳೆಯಿಂದಾಗಿ 23 ಜಿಲ್ಲೆಗಳ 130 ತಾಲ್ಲೂಕುಗಳು ಬಾಧಿತವಾಗಿವೆ. ಕಳೆದ ವರ್ಷ ಹತ್ತು ಲಕ್ಷ ಹೆಕ್ಟೇರ್ ಕೃಷಿಭೂಮಿ ಹಾನಿಗೀಡಾಗಿದ್ದರೆ, ಈ ವರ್ಷ 11 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಈ ದುಪ್ಪಟ್ಟು ನಷ್ಟದಿಂದ ರೈತರು ನೆಲಹಿಡಿದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.


from India & World News in Kannada | VK Polls https://ift.tt/34NoLrI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...