ಆರ್‌ಆರ್‌ ನಗರ: ಕೇಸರಿ ಬಣ್ಣದ ವಸ್ತ್ರ ಧರಿಸಿದ್ದಕ್ಕೆ ಆಕ್ಷೇಪ, ಕಾಂಗ್ರೆಸ್‌ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಗಟ್ಟೆ ಪ್ರದೇಶದಲ್ಲಿ ಕೇಸರಿ ವಸ್ತ್ರ ಧರಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಆರ್‌ ಆರ್‌ ನಗರದ ಕೊಟ್ಟಿಗೆಹಳ್ಳಿ ವಾರ್ಡ್‌ ನಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಟೀ ಶರ್ಟ್‌ ಹಾಗೂ ಕೇಸರಿ ಬಣ್ಣದ ಮಾಸ್ಕ್‌ ಹಾಕಿದ್ದರು. ಇದಕ್ಕೆ ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಮತದಾನದ ಸಂದರ್ಭದಲ್ಲಿ ಮತಗಟ್ಟೆಯ ಪರಿಸರದಲ್ಲಿ ಒಂದು ಪಕ್ಷದ ಅಥವಾ ಸಿದ್ದಾಂತದ ವಸ್ತ್ರ ಧರಿಸುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂಬುವುದು ಕಾಂಗ್ರೆಸ್ ಕಾರ್ಯಕರ್ತರ ವಾದವಾಗಿತ್ತು. ಈ ಕಾರಣಕ್ಕಾಗಿ ಆಕ್ಷೇಪ ಎತ್ತಿದ್ದಾರೆ. ಪರಿಣಾಮ ಮಾತಿನ ಚಕಮುಕಿಯೂ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆಯನ್ನು ವಿರೋಧಿಸಿ ಬಿಜೆಪಿ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಟೀ ಶರ್ಟ್‌ ಹಾಗೂ ಕೇಸರಿ ಮಾಕ್ಸ್ ಧರಿಸಿದ್ದನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಈ ಮೂಲಕ ಗಲಭೆಗೆ ಪ್ರೇರೇಪಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾನೂನು ಪ್ರಕೋಷ್ಠ ಹೇಮಂತ ಬಿ ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಸ್ಥಳದಲ್ಲಿರುವ ಪೊಲೀಸರಿಗೆ ಸೂಕ್ತ ಸೂಚನೆ ನೀಡಿ ಪರಿಸ್ಥಿತಿಯನ್ನು ಶಾಂತಗೊಳಿಸಬೇಕು ಕೇಸರಿ ಬಣ್ಣ ಧರಿಸುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗುವುದಿಲ್ಲ ಎಂಬುವುದು ಬಿಜೆಪಿ ವಾದವಾಗಿದೆ.


from India & World News in Kannada | VK Polls https://ift.tt/34ROZJZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...