ಯುಪಿಯಲ್ಲಿ ಡಬಲ್ ಯುವರಾಜರಿಗೆ ಆದ ಗತಿಯೇ ಬಿಹಾರದಲ್ಲೂ ಆಗಲಿದೆ: ಮೋದಿ!

ಸಮಸ್ತಿಪುರ್: ನಾಲ್ಕು ವರ್ಷಗಳ ಹಿಂದೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ, ಕಾಂಗ್ರೆಸ್-ಎಸ್‌ಪಿ ಮೈತ್ರಿಗೆ ಆದಾ ಗತಿಯೇ ಬಿಹಾರದ ಮಹಾಘಟಬಂಧನ್‌ಗೂ ಆಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮಸ್ತಿಪುರ್‌ದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶೀಸಿ ಮಾತನಾಡಿದ ಪ್ರಧಾನಿ ಮೋದಿ ಯುಪಿಯಲ್ಲಿ ಡಬಲ್ ಯುವರಾಜರಿಗೆ ಆದ ಗತಿಯೇ ಬಿಹಾರದಲ್ಲೂ ಆಗಲಿದೆ ಎಂದು ಹೇಳಿದರು. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಸ್‌ಪಿ ನಾಯಕ ಅಖಿಲೇಶ್ ಸಿಂಗ್ ಯಾದವ್ ಅವರ ನಡುವೆ ಮೈತ್ರಿ ಏರ್ಪಟ್ಟಿತ್ತು. ಅದರಂತೆ ಇದೀಗ ಬಿಹಾರದಲ್ಲಿ ರಾಹುಲ್ ಗಾಂಧಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಡುವೆ ಮೈತ್ರಿ ಏರ್ಪಟ್ಟಿದೆ. ಈ ಡಬಲ್ ಯುವರಾಜರನ್ನು ಬಿಹಾರದ ಜನತೆ ತಿರಸ್ಕರಿಸಲಿದ್ದು, ಇವರಿಗೆ ಉತ್ತರಪ್ರದೇಶದಲ್ಲಿ ಆದ ಗತಿಯೇ ಬಿಹಾರದಲ್ಲೂ ಕಾದಿದೆ ಎಂದು ಮೋದಿ ವ್ಯಂಗ್ಯವಾಡಿದರು. ಸಮಸ್ತಿಪುರ್‌ದಲ್ಲಿ ಸೇರಿರುವ ಜನಸ್ತೋಮ ಕಂಡು ಈ ಬಾರಿ ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರ ಪಡೆಯಲಿದೆ ಎಂಬ ವಿಶ್ವಾಸ ನನ್ನಲ್ಲಿ ಮೂಡಿದೆ ಎಂದು ಪ್ರಧಾನಿ ಮೋದಿ ನುಡಿದರು. ಒಂದು ಕಡೆ ಅಭಿವೃದ್ಧಿಗಾಗಿ ತನ್ನ ಸರ್ವಸ್ವವನ್ನೂ ಸಮರ್ಪಿಸಿರುವ ಎನ್‌ಡಿಎ ಇದೆ. ಮತ್ತೊಂದು ಕಡೆ ಕೇವಲ ಅಧಿಕಾರಕ್ಕೆ ಹಪಾಹಪಿಸುತ್ತಿರುವ ಮಹಾಘಟಬಂಧನ್ ಮೈತ್ರಿಕೂಟವಿದೆ. ಇವರೆಡರಲ್ಲಿ ಯಾವುದೇ ಬೇಕು ಎಂದು ಬಿಹಾರದ ಜನತೆ ಈಗಗಾಲೇ ನಿರ್ಧರಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಒಟ್ಟಿನಲ್ಲಿ ಪ್ರಧಾನಿ ಮೋದಿ ಇಂದಿನ(ನ.o1) ಎರಡನೇ ಚುನಾವಣಾ ಪ್ರಚಾರ ಸಭೆಯಲ್ಲಿ ವಿಪಕ್ಷಗಳ ಮೈತ್ರಿಕೂಟವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಪ್ರಧಾನಿ ಆರೋಪಗಳಿಗೆ ಮಹಾಘಟಬಂಧನ್ ಮೈತ್ರಿಕೂಟ ಹೇಗೆ ಪ್ರತಿಕ್ರಿಯೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.


from India & World News in Kannada | VK Polls https://ift.tt/2TJXj8e

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...