ಕೋವಿಡ್‌ ನಿಯಮ ಉಲ್ಲಂಘನೆ: ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್‌!

ಬೆಂಗಳೂರು: ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದ್ದ ಪ್ರಕರಣಗಳ ಸಂಬಂಧ ಹೈಕೋರ್ಟ್‌, ಆರು ರಾಜಕೀಯ ಪಕ್ಷಗಳಿಗೆ ಮಂಗಳವಾರ ಜಾರಿ ಮಾಡಿದೆ. ನಗರದ ಲೆಟ್ಜ್ ಕಿಟ್‌ ಫೌಂಡೇಶನ್‌ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಮತ್ತು ನ್ಯಾ.ಎಸ್‌. ವಿಶ್ವಜಿತ್‌ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕಳೆದ ವಿಚಾರಣೆ ವೇಳೆ ನ್ಯಾಯಾಲಯ ಸೂಚಿಸಿದ್ದಂತೆ ಅರ್ಜಿದಾರರು, ರಾಜ್ಯದಲ್ಲಿನ ಆರು ರಾಜಕೀಯ ಪಕ್ಷಗಳ ಕುರಿತು ಮಾಹಿತಿ ನೀಡಿ, ಪ್ರತಿವಾದಿಗಳನ್ನಾಗಿ ಮಾಡಲು ಮೆಮೋ ಸಲ್ಲಿಸಿದ್ದರು. ಅದನ್ನು ದಾಖಲಿಸಿಕೊಂಡ ಪೀಠ, ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಅಧಿಕೃತವಾಗಿ ಅರ್ಜಿಯಲ್ಲಿ ಸೇರಿಸಿ ತಿದ್ದುಪಡಿ ಮಾಡಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಿತು. ಅಲ್ಲದೆ, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಸಿಪಿಐ, ಸಿಪಿಎಂ ಹಾಗೂ ಕನ್ನಡ ಚಳವಳಿ ವಾಟಾಳ್‌ ಪಕ್ಷಗಳಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಡಿ. 4ಕ್ಕೆ ಮುಂದೂಡಿತು. ಇ- ಮೇಲ್‌ ಮೂಲಕ ನೋಟಿಸ್‌ ಕೂಡ ತಲುಪಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ಡಿ.5ರ ಬಂದ್‌ ವಿಚಾರವೂ ಪ್ರಸ್ತಾಪ ಇದೇ ವೇಳೆ ಅರ್ಜಿದಾರರ ಪರ ವಕೀಲರೊಬ್ಬರು, ಮರಾಠಾ ನಿಗಮ ರಚಿಸುವ ಸರಕಾರದ ನಿರ್ಧಾರದ ವಿರುದ್ಧ ಡಿ.5ರಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಹಲವು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆಗ ಕೋವಿಡ್‌ ನಿಯಮ ಉಲ್ಲಂಘನೆಯಾಗುವ ಸಾಧ್ಯತೆ ಇದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಹಾಗಾಗಿ, ನ್ಯಾಯಪೀಠ, ಕನ್ನಡ ಚಳವಳಿ ವಾಟಾಳ್‌ ಪಕ್ಷಕ್ಕೂ ನೋಟಿಸ್‌ ನೀಡಿ ಉತ್ತರಿಸಲು ಸೂಚನೆ ನೀಡಿತು.


from India & World News in Kannada | VK Polls https://ift.tt/2IWLXMn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...