ಬೆಂಗಳೂರು: ಎಐಸಿಸಿ ಖಜಾಂಚಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸೂಚಿಸಿದ್ದಾರೆ. 'ಅಹ್ಮದ್ ಪಟೇಲ್ ಅವರ ಅವರ ಅಗಲಿಕೆ ಸುದ್ದಿ ಆಘಾತ ತಂದಿದೆ. ಅಹ್ಮದ್ ಪಟೇಲ್ ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದರು. ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು' ಎಂದು ಶಿವಕುಮಾರ್ ಸ್ಮರಿಸಿಕೊಂಡಿದ್ದಾರೆ. 'ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದವರು ಅಹ್ಮದ್ ಪಟೇಲ್. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ' ಎಂದು ಸಂತಾಪ ಸೂಚಿಸಿದ್ಧಾರೆ. 'ಅಹ್ಮದ್ ಪಟೇಲ್ ಜತೆ ಮೊದಲಿಂದಲೂ ಉತ್ತಮ ಒಡನಾಟ ಹೊಂದಿದ್ದೆ. ಅವರು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಮಾರ್ಗದರ್ಶಕರಾಗಿದ್ದರು. ಅವರ ಆಲೋಚನೆ, ವಿಚಾರ, ಸಿದ್ಧಾಂತಗಳು ನಮ್ಮೆಲ್ಲರಿಗೂ ಮಾದರಿಯಾಗಿತ್ತು' ಎಂದು ಶಿವಕುಮಾರ್ ಹೇಳಿದ್ದಾರೆ. 'ಅಹ್ಮದ್ ಪಟೇಲ್ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ. 2017ರ ರಾಜ್ಯಸಭಾ ಚುನಾವಣೆಯಲ್ಲಿ ಗುಜರಾತ್‌ನಿಂದ ಅಹ್ಮದ್ ಪಟೇಲ್ ಸ್ಪರ್ಧಿಸಿದ್ದರು. ಈ ವೇಳೆ, ಗುಜರಾತ್‌ನ 44 ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ರವಾನಿಸಲಾಗಿತ್ತು. ಆಗ ಇಂಧನ ಸಚಿವರಾಗಿದ್ದ ಡಿಕೆಶಿ ಸಾರಥ್ಯದಲ್ಲಿ ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕರನ್ನು ಇರಿಸಲಾಗಿತ್ತು. ಈ ವೇಳೆ ಡಿ.ಕೆ. ಶಿವಕುಮಾರ್ ಮೇಲೆ ಐಟಿ ದಾಳಿ ನಡೆದಿದ್ದನ್ನು ಸ್ಮರಿಸಬಹುದು.
from India & World News in Kannada | VK Polls https://ift.tt/3m7tc6Y