ನಿವಾರ್‌ ಚಂಡಮಾರುತದ ಎಫೆಕ್ಟ್‌: ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಎಂಟ್ರಿ ಕೊಡುವ ವೇಳೆ ಬರೋಬ್ಬರಿ ಗಂಟೆಗೆ 100ಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಹೀಗಾಗಿ ಭಾರೀ ಸುರಕ್ಷತಾ ಕ್ರಮಗಳನ್ನು ಎನ್‌ಡಿಆರ್‌ಎಫ್‌ ಕೈಗೊಂಡಿದೆ. ಇನ್ನು ಚಂಡಮಾರುತದ ಎಫೆಕ್ಟ್‌ ಕೇವಲ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಗೆ ಮಾತ್ರವಲ್ಲದೇ ಬೆಂಗಳೂರಿಗೂ ತಟ್ಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ ಎಂದು ತಿಳಿಸಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿತ್ತು, ವಾಹನಗಳು ರಸ್ತೆಗಳ ನೀರಿನಲ್ಲಿ ಆಟಿಕೆಗಳಂತೆ ತೇಲಿ ಹೋಗುತ್ತಿದ್ದವು. ಇನ್ನು ನಿವಾರ್‌ ಚಂಡಮಾರುತ ಪರಿಣಾಮದಿಂದ ಬೆಂಗಳೂರಿನಲ್ಲಿ ನ. 25 ರಿಂದ 27ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಬೆಂಗಳೂರು ಸೇರಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.ಇನ್ನು ಈ ಹಿನ್ನೆಲೆ ಬಿಬಿಎಂಪಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಸದ್ಯ ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಪುದುಚೇರಿಯತ್ತ ನಿವಾರ್‌ ಚಂಡಮಾರುತ ಎಂಟ್ರಿಕೊಡಲಿದ್ದು ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ. ಪುದುಕೋಟೈ, ತಂಜಾವೂರು, ತಿರುವರೂರು, ಕಾರೈಕಲ್, ನಾಗಪಟ್ಟಣಂ, ಕಡಲೂರು, ಅರಿಯಲೂರು ಮತ್ತು ಪೆರಬಾಲು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಸ್ತೆಗಳಿಗೆ, ಕೃಷಿಗೆ, ಸಾರ್ವಜನಿಕ ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ 22 ಎನ್‌ಡಿಆರ್‌ಎಫ್‌ ತಂಡಗಳನ್ನು ರಕ್ಷಣೆ ಹಿನ್ನೆಲೆ ನಿಯೋಜಿಸಲಾಗಿದೆ.


from India & World News in Kannada | VK Polls https://ift.tt/399SbTH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...