ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ವಿಚಾರ: ದಿಲ್ಲಿಗೆ ತೆರಳಿ ಸಮಾಲೋಚನೆ ಬಳಿಕ ನಿರ್ಧಾರ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದ ಬಳಿ ಮಾತನಾಡಿದ ಸಿಎಂ ಬಿಎಸ್‌ವೈ, ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ -2 ಪಟ್ಟಿಗೆ ಸೇರ್ಪಡೆ ಸಂಬಂಧ ದಿಲ್ಲಿಗೆ ಹೋಗಿ ಸಮಾಲೋಚನೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ. ಸಚಿವ ಸಂಪುಟದ ಇನ್ನಿತರ ಸಹದ್ಯೋಗಿಗಳ ಅಭಿಪ್ರಾಯವು ಇದೇ ಆಗಿದೆ ಎಂದಿದ್ದಾರೆ. ದಿಲ್ಲಿಗೆ ಹೋಗಿ ಚರ್ಚೆ ನಡೆಸುತ್ತೇವೆ. ನಂತರ ತಿರ್ಮಾನವನ್ನು ತೆಗೆದುಕೊಳ್ಳುತ್ತೇವೆ. ಅದು ವಿಶೇಷ ತಿರ್ಮಾನವಾಗಿರಲಿದೆ ಎಂದು ಮಾರ್ಮಿಕವಾಗಿ ನುಡಿದಿರುವ ಬಿಎಸ್‌ ಯಡಿಯೂರಪ್ಪ, ಇದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನಿರ್ಧಾರದ ಬಗ್ಗೆ ಸಮಿತಿ ಬೇಕು ಎನ್ನುವುದಾದರೆ ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದಿದ್ದಾರೆ. ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆಯನ್ನು ಆ ಸಮುದಾಯದ ಮುಖಂಡರು ಮಾಡುತ್ತಿದ್ದಾರೆ. ಹಲವು ಸ್ವಾಮೀಜಿಗಳು ಪ್ರತಿಭಟನೆ ಕೂಡ ನಡೆಸಿದ್ದರು.


from India & World News in Kannada | VK Polls https://ift.tt/3mdjG2e

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...