ಲವ್‌ ಜಿಹಾದ್‌ ತಡೆಗೆ ಕಾನೂನು, ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ನಳಿನ್‌ ಕುಮಾರ್‌ ಕಟೀಲ್‌

ಬಂಟ್ವಾಳ: ತಡೆಗೆ ಮುಂದಿನ ಅಧಿವೇಶನದಲ್ಲಿ ರೂಪಿಸಲಾಗುತ್ತದೆ. ಗೋಹತ್ಯೆ ನಿಷೇಧ, ಕರಾವಳಿಗೆ ಸ್ಪಷ್ಟ ಮರಳುನೀತಿ, ಜಿಲ್ಲೆಯಲ್ಲಿರುವ ರೈತರ ರಕ್ಷಣೆಗೆ ಕುಮ್ಕಿ ಹಕ್ಕು ರೈತನಿಗೆ ದೊರಕುವಂತೆ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮಾಡಲಿದ್ದು, ಪ್ರತಿಯೊಂದು ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರು ಗೆಲ್ಲಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಹೇಳಿದ್ದಾರೆ. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಬಂಟ್ವಾಳ, ಮೂಡುಬಿದಿರೆ, ಮಂಗಳೂರು, ಮಂಗಳೂರು ನಗರ ಉತ್ತರ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ಪಂಚಾಯಿತಿಗೆ ಒಂದರಿಂದ 2 ಕೋಟಿ ರೂ.ಗಳಷ್ಟು ಅನುದಾನ ಬರಲಿದೆ. ಗ್ರಾಪಂ ಅಧ್ಯಕ್ಷರು ಪ್ರಧಾನಿಯಷ್ಟೇ ಪವರ್‌ ಫುಲ್‌ ಆಗಲಿದ್ದಾರೆ ಎಂದ ಅವರು, ದೇಶ ವಿರೋಧಿ ಕೃತ್ಯಗಳನ್ನು ಬಿಜೆಪಿ ಸಹಿಸುವುದಿಲ್ಲ. ಮಂಗಳೂರಿನಲ್ಲಿ ಕಿಡಿಗೇಡಿಗಳು ಬರೆದ ದೇಶದ್ರೋಹಿ ಗೋಡೆಬರಹಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು. ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಕಾರ್ಯಕ್ರಮ ಉದ್ಘಾಟಿಸಿ, ತುಷ್ಟೀಕರಣ ನೀತಿಯಿಂದಾಗಿ ಕಾಂಗ್ರೆಸ್‌ ಇಂದು ಮೂಲೆಗುಂಪಾಗಿದ್ದು, ಗ್ರಾಮಗಳಲ್ಲಿ ನಿಜವಾದ ಸ್ವರಾಜ್ಯ ಮೂಡಿಬರಲು ಬಿಜೆಪಿ ಅಧಿಕಾರಕ್ಕೆ ಬರುವುದು ಅನಿವಾರ್ಯವಾಗಿದೆ ಎಂದರು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ಕೋಲಾರ ಸಂಸದ ಮುನಿಸ್ವಾಮಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್‌ ನಾಯ್ಕ್ ಉಳಿಪ್ಪಾಡಿಗುತ್ತು, ಉಮಾನಾಥ ಕೋಟ್ಯಾನ್‌, ಡಾ. ವೈ. ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌ ಮಾತನಾಡಿದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ವಿವೇಕಾನಂದ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌, ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಸಂತೋಷ್‌ ಕುಮಾರ್‌ ಬೋಳ್ಯಾರ್‌, ಪ್ರಮುಖರಾದ ಉದಯಕುಮಾರ್‌ ಶೆಟ್ಟಿ, ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ವಂದೇ ಮಾತರಂ ಹಾಡಿದರು. ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಮೂಡುಬಿದಿರೆ ಕ್ಷೇತ್ರಾಧ್ಯಕ್ಷ ಸುನಿಲ್‌ ಆಳ್ವ ವಂದಿಸಿದರು. ಜಿಲ್ಲಾಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.


from India & World News in Kannada | VK Polls https://ift.tt/39nt3J4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...