ಬೆಂಗಳೂರು: ವಿಚಾರವಾಗಿ ತಲೆಧೋರಿರುವ ಗೊಂದಲ ಮುಂದುವರಿದಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಬಿಎಸ್‌ವೈಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಕುತೂಹಲ ಕೆರಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತಾಗಿ ಯಾವುದೇ ಪ್ರತಿಕ್ರಿಯೆಯನ್ನು ನೀಡಲು ಯಡಿಯೂರಪ್ಪ ನಿರಾಕರಿಸಿದ್ದಾರೆ. ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಭೇಟಿ ನೀಡಿ ವರಿಷ್ಠರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಗ್ರೀನ್ ಸಿಗ್ನಲ್ ದೊರಕಿರಲಿಲ್ಲ. ಹೀಗಿದ್ದರೂ ಇನ್ನೇನು ಮೂರು ದಿನಗಳಲ್ಲಿ ಎಲ್ಲವು ಸುಖಾಂತ್ಯಗೊಳ್ಳಲಿದೆ ಎಂದು ಬಿಎಸ್‌ವೈ ಗಡುವು ನೀಡಿದ್ದರು. ಸಿಎಂ ಕೊಟ್ಟ ಗಡುವು ಕೂಡಾ ಇದೀಗ ಮುಕ್ತಾಯಗೊಂಡಿದೆ. ಆದರೆ ಸಂಪುಟ ವಿಸ್ತರಣೆ ಕುರಿತಾಗಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾಗಿಯಾಗಿದ್ದರು. ಸಭೆಯ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಎಲ್ ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹೀಗಾದರೂ ಸಂಪುಟ ವಿಸ್ತರಣೆಯ ವಿಚಾರವಾಗಿ ಯಾವುದೇ ಸುಳಿವು ಸಿಕ್ಕಿಲ್ಲ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಬಿಎಸ್‌ವೈ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದಾಗಲೂ ಪ್ರತಿಕ್ರಿಯೆ ನೀಡಲು ಬಿಎಸ್‌ವೈ ನಿರಾಕರಿಸಿದರು.
from India & World News in Kannada | VK Polls https://ift.tt/39c2qqy