ಬೆಂಗಳೂರು: ನನ್ನ ಹಣೆಬರಹ ಚೆನ್ನಾಗಿಲ್ಲ ಅದಕ್ಕೇ ಇನ್ನೂ ಮಂತ್ರಿಯಾಗಿಲ್ಲ...... ಇದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿರುವ ಹೊಸಕೋಟೆಯ ಪ್ರಮುಖ ನಾಯಕ ಮನದಾಳದ ಮಾತು. ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಹುಶಃ ನನ್ನ ಹಣೆಬರಹ ಚೆನ್ನಾಗಿಲ್ಲ ಎನಿಸುತ್ತದೆ. ಅದಕ್ಕೆ ಇನ್ನೂ ಮಂತ್ರಿಯಾಗಿಲ್ಲ. ನೋಡೋಣ ಮುಂದಿನ ದಿನಗಳಲ್ಲಿ ಸಿಗುವ ಭರವಸೆ ಇದೆ ಎಂದರು. ನಮ್ಮ ಸಮಾಜದ ಸ್ವಾಮೀಜಿಗಳು ಕೂಡ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅತಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಕೂಡ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂತಸದ ಸುದ್ದಿಯನ್ನು ನಿರೀಕ್ಷಿಸುತ್ತಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ನಂತರ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಭರವಸೆಯನ್ನು ನೀಡಿದ್ದಾರೆ. ಅದರಂತೆ ಈಗಾಗಲೇ ಹಲವರಿಗೆ ಸಚಿವ ಸ್ಥಾನ ನೀಡಲಾಗಿದೆ. ನಮಗೂ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಎಂಟಿಬಿ ನಾಗರಾಜ್ ಹೇಳಿದರು.
from India & World News in Kannada | VK Polls https://ift.tt/33p2Vda