ಘನ ತ್ಯಾಜ್ಯ ಸಂಸ್ಕರಣಾ ಘಟಕದ ದುರ್ವಾಸನೆ: ಬಿಬಿಎಂಪಿಗೆ ಸಾರ್ವಜನಿಕರಿಂದ ಟ್ವೀಟ್‌!

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಚಿಕ್ಕನಾಗಮಂಗಲ ಬಳಿ ನಿರ್ಮಿಸಿರುವ ಘನ ತ್ಯಾಜ್ಯ ಸಂಸ್ಕರಣಾ ಘಟಕದಿಂದ ಹೊರಬರುತ್ತಿರುವ ದುರ್ವಾಸನೆಯಿಂದಾಗಿ ಕಂಗೆಟ್ಟಿರುವ ಸ್ಥಳೀಯರು ಪಾಲಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟಕವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ನಿವಾಸಿಗಳು ಬಿಬಿಎಂಪಿಗೆ ಟ್ವೀಟ್‌ಗಳ ಸುರಿಮಳೆ ಗೈದಿದ್ದಾರೆ. ಹಸಿ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದನೆ ಮಾಡಲು ಈ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಘಟಕದಿಂದ ಹೊರಬರುವ ದುರ್ನಾತದಿಂದ ಸ್ಥಳೀಯ ನಿವಾಸಿಗಳು ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ, ನೊಣಗಳ ಕಾಟ ಸಹಿಸಲಾಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಬಿಬಿಎಂಪಿ ಆಯುಕ್ತರು ಸೇರಿದಂತೆ ಇತರೆ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ನಿವಾಸಿಗಳ ದೂರಿನ ಮೇರೆಗೆ 2015ರಲ್ಲಿ ಈ ಘಟಕವನ್ನು ಪರಿಶೀಲಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಬಿಎಂಪಿಗೆ ನೋಟಿಸ್‌ ನೀಡಿತ್ತು. ಜತೆಗೆ, 2020ರ ಮಾರ್ಚ್ ವರೆಗೆ ಮಾತ್ರ ಅನುಮತಿ ನೀಡಿತ್ತು. ಘಟಕದಲ್ಲಿ ಕಡ್ಡಾಯವಾಗಿ ಲಿಚೆಟ್‌ ಸಂಸ್ಕರಣಾ ಸೌಲಭ್ಯ ಕಲ್ಪಿಸುವಂತೆ ಸೂಚಿಸಿತ್ತು. ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಪಾಲಿಕೆಯು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 2021ರವರೆಗೆ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.


from India & World News in Kannada | VK Polls https://ift.tt/3oTzOrx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...