ಮಲೆ ಮಹದೇಶ್ವರ ಮೊರೆ ಹೋದ ಬಿಎಸ್‌ವೈ, ತುಂತುರು ಮಳೆಯಲ್ಲೇ ದೇವರ ದರ್ಶನ

ಚಾಮರಾಜನಗರ: ಸಂಪುಟ ವಿಸ್ತರಣೆ ವಿಳಂಬ, ನಾಯಕತ್ವ ಬದಲಾವಣೆ ಗೊಂದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಗುರುವಾರ ಮಲೆ ಮಹದೇಶ್ವರ ದರ್ಶನ ಪಡೆದಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಲೆ ಮಹದೇಶ್ವರ ದರ್ಶನ ಪಡೆದರು. ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತುಂತುರು ಮಳೆ ಸುರಿಯುತ್ತಿದೆ. ತುಂತುರು ಮಳೆಯ ನಡುವೆ ಬಿಎಸ್‌ವೈ ಮಹದೇಶ್ವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಜೊತೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಂಡಿರುವ ಅಭಿವೃದ್ದಿ ಕಾರ್ಯಕ್ರಮಗಳಿಗೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಬುಧವಾರ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು.ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಿದ್ದರು. ಇದಾದ ಬಳಿಕ ಗುರುವಾರ ಚಾಮರಾಜನಗರ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಶಾಸಕರಾದ ನರೇಂದ್ರ, ಎನ್ ಮಹೇಶ್ ಹಾಗೂ ನಿರಂಜನ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/3l5F9ZO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...