ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ದೇಶಾದ್ಯಂತ 10 ರಾಜ್ಯಗಳಲ್ಲಿ ಒಟ್ಟು 54 ವಿಧಾನ ಸಭಾ ಕ್ಷೇತ್ರಗಳಿಗೆ ಉಪಚಾವಣೆಯ ಮಂಗಳವಾರ ಆರಂಭವಾಗಿದ್ದು, ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಬಿಹಾರ 2ನೇ ಹಂತದ ವಿಧಾನ ಸಭಾ ಚುನವಾಣೆ, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಒಟ್ಟು 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ನಡೆಯುತ್ತಿದೆ. ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬಗಳಿದ್ದಂತೆ ಸಂಭ್ರದಿಂದ ಆಚರಿಸಿ. ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿದ್ದು, ಈ ಪ್ರದೇಶಗಳಲ್ಲಿನ ಜನರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಈ ಉತ್ಸವವನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 28, ಗುಜರಾತ್‌ನಲ್ಲಿ 8, ಉತ್ತರಪ್ರದೇಶದಲ್ಲಿ 7, ಒಡಿಶಾ, ನಾಗಾಲ್ಯಾಂಡ್, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ತೆಲಂಗಾಣ ಮತ್ತು ಹರಿಯಾಣದಲ್ಲಿ ತಲಾ ಒಂದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಛತ್ತೀಸ್‌ಗಢ, ಜಾರ್ಖಾಂಡ್ ಮತ್ತು ನಾಗಾಲ್ಯಾಂಡ್‌ನಲ್ಲಿ ಕೊರೊನಾ ಸೋಂಕು ತಗುಲಿದ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆಗಳಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.


from India & World News in Kannada | VK Polls https://ift.tt/3emnVW8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...