ಸೋನಿಯಾ ಗಾಂಧಿ ಆಪ್ತರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್‌ ಇನ್ನಿಲ್ಲ..!

ಹೊಸದಿಲ್ಲಿ: ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಕಾಂಗ್ರೆಸ್‌ ಮುಖಂಡ ಅಹ್ಮದ್ ಪಟೇಲ್ ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. 71 ವರ್ಷ ವಯಸ್ಸಿನ ಅಹ್ಮದ್‌ ಪಟೇಲ್ ಅವರು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ಕಾಂಗ್ರೆಸ್‌ ಮುಖಂಡ ನಿಧನರಾಗಿರುವ ಬಗ್ಗೆ ಅವರ ಪುತ್ರ ಫೈಸಲ್ ಪಟೇಲ್‌ ಟ್ವೀಟ್‌ ಮೂಲಕ ಖಚಿತಪಡಿಸಿದ್ದಾರೆ. ತಾವು ಮಾಡಿರುವ ಟ್ವೀಟ್‌ನಲ್ಲಿ ಫೈಸಲ್ ಅವರು, ‘ನನ್ನ ತಂದೆ ಶ್ರೀ ಅಹ್ಮದ್‌ ಪಟೇಲ್‌ರವರು 25/11/2020ರ ಮುಂಜಾನೆ 3.30ರ ಸುಮಾರಿಗೆ ಅಕಾಲಿಕ ನಿಧನ ಹೊಂದಿದರೆಂದು ತಿಳಿಸಲು ವಿಷಾಧಿಸುತ್ತೇನೆ. ಒಂದು ತಿಂಗಳ ಹಿಂದೆಯೇ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತಾದರೂ, ಬಹುಅಂಗಾಂಗ ವೈಫಲ್ಯದಿಂದ ಅವರ ಆರೋಗ್ಯವು ಇನ್ನಷ್ಟು ಕ್ಷೀಣಿಸಿತು. ಯಾವುದೇ ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವಾಗ ಕೋವಿಡ್‌ ನಿಯಮಗಳನ್ನು ಪಾಲಿಸಿ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಹತ್ತು ದಿನಗಳ ಹಿಂದೆ ಗುರುಗ್ರಾಮ್‌ನ ಮೆಡಂತಾ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಹ್ಮದ್ ಪಟೇಲ್ ಅವರು, ಸದ್ಯ ಗುಜರಾತ್‌ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒಟ್ಟು ಎಂಟು ಬಾರಿ ಸಂಸದರಾಗಿರೋ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅತ್ಯಾಪ್ತರಲ್ಲಿ ಒಬ್ಬರಾಗಿದ್ದಾರೆ. ಅಕ್ಟೋಬರ್‌ ಒಂದರಂದು ಕೊರೊನಾ ಪಾಸಿಟಿವ್‌ ಬಗ್ಗೆ ಟ್ವೀಟ್ ಮಾಡಿದ್ದ ಅಹ್ಮದ್ ಪಟೇಲ್, ‘ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.ಇತ್ತೀಚೆಗೆ ನನ್ನ ಜೊತೆ ನಿಕಟ ಸಂಪರ್ಕದಲ್ಲಿದ್ದವರು ಸ್ವಯಂ ಕ್ವಾರೆಂಟೈನ್‌ಗೆ ಒಳಗಾಗಿ’ ಎಂದು ಮನವಿ ಮಾಡಿದ್ದರು. ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್‌ ಅವರ ನಿಧನದ ಎರಡು ದಿನದ ನಂತರ, ಅಹ್ಮದ್ ಪಟೇಲ್ ಅವರು ನಿಧನರಾಗಿದ್ದಾರೆ.


from India & World News in Kannada | VK Polls https://ift.tt/2J5WYLf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...