ಬೆಂಗಳೂರು: ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದ್ದು ಇದರ ಮುಂದುವರಿದ ಭಾಗವಾಗಿ ಸಚಿವ ಸಿಎಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ಸಿಎಂ ನಿವಾಸ ಕಾವೇರಿಗೆ ತೆರಳಿದ ರಮೇಶ್ ಜಾರಕಿಹೊಳಿ ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸಿದರು. ಸಂಪುಟ ವಿಸ್ತರಣೆಗೆ ಸಿಎಂ ಕೊಟ್ಟ ಕಾಲಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ವಲಸೆ ಬಂದ ಎಲ್ಲರಿಗೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಈ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ ಇನ್ನೇನು ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಭರವಸೆ ನೀಡಿದ ಅವಧಿ ಕಳೆದರೂ ಸಂಪುಟ ವಿಸ್ತರಣೆ ಕುರಿತಾಗಿ ವರಿಷ್ಠರಿಂದ ಸಮ್ಮತಿ ಇನ್ನು ದೊರಕಿಲ್ಲ. ಬಿಎಸ್ ಯಡಿಯೂರಪ್ಪ ವಲಸೆ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಇದಕ್ಕೆ ವರಿಷ್ಠರು ಒಪ್ಪಿಗೆ ಸೂಚಿಸುತ್ತಿಲ್ಲ. ಪರಿಣಾಮ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಆಪರೇಷನ್ ಕಮಲದಲ್ಲಿ ಬಹುಮುಖ್ಯ ಪಾತ್ರ ವಹಿಸಿರುವ ರಮೇಶ್ ಜಾರಕಿಹೊಳಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಲಹ ಕೆರಳಿಸಿದೆ.
from India & World News in Kannada | VK Polls https://ift.tt/3fAaToM