ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ನಿಧನದಿಂದಾಗಿ ಓರ್ವ ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ,ಅಹ್ಮದ್ ಪಟೇಲ್ ನಿಧನದಿಂದ ಕಾಂಗ್ರೆಸ್ ಪಕ್ಷ ನಿಷ್ಠಾವಂತ ನಾಯಕನನ್ನು ಮತ್ತು ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣರಾಗಿದ್ದ ಪಟೇಲ್ ಅವರು ಕೊನೆಯವರೆಗೆ ಹಿತೈಷಿಯಾಗಿದ್ದವರು.ಈ ಸಾವಿನ ದು:ಖ ಮಾತುಗಳನ್ನು ಮೀರಿದ್ದು. ಹೋಗಿಬನ್ನಿ ಪಟೇಲ್‌ಜಿ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ನನಗೆ ಆತ್ಮೀಯರಾಗಿದ್ದ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರಸ್ಥಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಿಬಾರದ ನಷ್ಟ.ಅವರ ಕುಟುಂಬದ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವಿಟ್ಟರ್‌ನಲ್ಲಿ ಸಂತಾಪವನ್ನು ಸೂಚಿಸಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡಾ ಅಹ್ಮದ್ ಪಟೇಲ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿದ ಅವರು ಅಹ್ಮದ್ ಪಟೇಲ್ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ. ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಅಹ್ಮದ್ ಪಟೇಲ್ ಕೋವಿಡ್ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು.71 ವರ್ಷ ವಯಸ್ಸಿನ ಅಹ್ಮದ್ ಪಟೇಲ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬುಧವಾರ ಮುಂಜಾನೆ 3.30 ಸುಮಾರಿಗೆ ಸಾವನ್ನಪ್ಪಿದ್ದಾರೆ.
from India & World News in Kannada | VK Polls https://ift.tt/3l2U9ro