ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್ ಆರೋಪ

ಚಿತ್ರದುರ್ಗ : ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಕೋವಿಡ್‌ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರವಾಗಿ ರಾಜ್ಯದಲ್ಲಿರುವ ಎಲ್ಲ ವರ್ಗಗಳ ಜನರ ಆರೋಗ್ಯವನ್ನು ರಕ್ಷಣೆ ಮಾಡುವುದು ಜವಾಬ್ದಾರಿಯಾಗಿದೆ. ಆದರೆ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು. ಈ ವೇಳೆ ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ನೂತನ ಜಿಲ್ಲೆ ರಚನೆ ಬಗ್ಗೆ ಮಾಹಿತಿ ಇಲ್ಲ. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ನಾನು ಮಾತನಾಡುತ್ತೇನೆ' ಎಂದರು. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚನೆ ಮಾಡಲು ಸರ್ಕಾರ ಮೌಕಿಕ ಆದೇಶ ನೀಡಿದೆ. ಆದರೆ ಸರ್ಕಾರದ ನಿಲುವಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೂಡಾ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


from India & World News in Kannada | VK Polls https://ift.tt/394pTtD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...