ಮತದಾರರು ನೊಂದವರ ಪರವಾಗಿ ಕೆಲಸ ಮಾಡೋ ಹೆಣ್ಣಿನ ‘ಕೈ’ ಹಿಡಿಯುತ್ತಾರೆ, ಕುಸುಮಾ ವಿಶ್ವಾಸ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರು ನೊಂದವರ ಪರವಾಗಿ ಕೆಲಸ ಮಾಡುವ ಹೆಣ್ಣಿನ ಕೈ ಹಿಡಿಯುತ್ತಾರೆ ಎಂದು ಅಭ್ಯರ್ಥಿ ಕುಸುಮಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜ್ಞಾನಭಾರತಿ ವಾರ್ಡ್ ನ ಮಲ್ಲತ್ತಹಳ್ಳಿಯ ಕನ್ಯಾಕುಮಾರಿ ಪ್ರೌಢಶಾಲೆಯಲ್ಲಿನ ಮತಗಟ್ಟೆ ಸಂಖ್ಯೆ 304-A ರಲ್ಲಿ ಮಂಗಳವಾರ ಬೆಳಗ್ಗೆ ಮತದಾನ ಮಾಡಿದ ಬಳಿಕ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್‌, ನನ್ನ ಮತ ನನ್ನ ಹಕ್ಕಾಗಿದೆ. ನೊಂದವರ ಪರವಾಗಿ ಕೆಲಸ ಮಾಡುವ ಹೆಣ್ಣು ಮಗಳಿಗೆ ಮತ ಹಾಕಿದ್ದೇನೆ ಎಂದರು. ಚುನಾವಣಾ ಆಯೋಗ ಎಲ್ಲಾ ರೀತಿಯ ಮುಂಜಾಗರೂಕತಾ ಕ್ರಮ ಕೈಗೊಂಡಿದೆ. ಹೀಗಾಗಿ ಜನರು ನಿರಾತಂಕವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ವಿನಂತಿಸಿದರು. ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾನು ಗೆಲ್ಲುವ ವಿಶ್ವಾಸದಲ್ಲಿ ಇದ್ದೇನೆ. ನೊಂದವರ ಪರವಾಗಿ ಹಾಗೂ ಅಭಿವೃದ್ದಿ ಪರವಾಗಿ ಕೆಲಸ ಮಾಡುವವರಿಗೆ ಜನ ಮತ ಹಾಕುತ್ತಾರೆ ಎಂಬ ವಿಶ್ವಾಸ ಇದೆ ಎಂದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಇದೇ ಸಂದರ್ಭದಲ್ಲಿ ವಿನಂತಿಸಿಕೊಂಡರು. ಆರ್‌ ಆರ್‌ ನಗರದಲ್ಲಿ ಕಾಂಗ್ರೆಸ್‌ನಿಂದ ಕುಸುಮಾ ಸ್ಪರ್ಧೆ ನಡೆಸಿದರೆ ಬಿಜೆಪಿಯಿಂದ ಮುನಿರತ್ನ ನಾಯ್ಡು ಹಾಗೂ ಜೆಡಿಎಸ್‌ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. 9 ಗಂಟೆಯವರೆಗೆ ಆರ್‌ ಆರ್‌ ನಗರದಲ್ಲಿ ಶೇ. 6.27 ರಷ್ಟು ಮತದಾನ ನಡೆದಿದೆ.


from India & World News in Kannada | VK Polls https://ift.tt/3mSODJf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...