ಕೋವಿಡ್ ಸವಾಲುಗಳ ನಡುವೆಯೂ ಹರಿದ್ವಾರದಲ್ಲಿ 'ಕುಂಭಮೇಳ' ನಡೆಯಲಿದೆ: ಸಿಎಂ ತ್ರಿವೇಂದ್ರ ರಾವತ್‌

ಡೆಹ್ರಾಡೂನ್‌: ಕೊರೊನಾ ವೈರಸ್‌ ಎಂಬ ಸಾಂಕ್ರಾಮಿಕ ರೋಗದಿಂದ ಎದುರಾಗಿರುವ ಹಲವು ಸಮಸ್ಯೆಗಳ ನಡುವೆಯು 2021ರಲ್ಲಿ ಹರಿದ್ವಾರದಲ್ಲಿ '' ದೈವಿಕ ರೂಪದಲ್ಲಿ ನಡೆಯಲಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್‌ ರಾವತ್‌ ಪುನರುಚ್ಚರಿಸಿದ್ದಾರೆ. 2021ರ ಜನವರಿ 14ರಿಂದ ಆರಂಭವಾಗಲಿರುವ ಕುಂಭಮೇಳದ ಸಿದ್ಧತೆಗೆ ಸಂಬಂಧಿಸಿದಂತೆ ಅಖಿಲ ಭಾರತೀಯ ಅಖಾಡಾ ಪರಿಷತ್ (ಎಬಿಎಪಿ) ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ರಾವತ್‌ ಅವರು ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಒಮ್ಮೆ ಆರಂಭವಾದ ಕುಂಭಮೇಳ ಮುಂದುವರಿಸುವ ಬಗ್ಗೆ ಕೊರೊನಾದ ಆಗಿನ ಪರಿಸ್ಥಿತಿಯನ್ನು ಅವಲಂಬಿಸಿರುತ್ತದೆ. ಆದರೂ ಅಖಿಲ ಭಾರತೀಯ ಅಖಾಡಾ ಪರಿಷತ್‌ನ ಸಲಹೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಚಾಲ್ತಿಯಲ್ಲಿರುವ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಇನ್ನು ಸರ್ಕಾರದ ಇಲಾಖೆಗಳ ಕಾರ್ಯದರ್ಶಿಗಳು ಕುಂಭಮೇಳದ ಸಿದ್ಧತೆಯ ಕಾರ್ಯಗಳ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಸಹ 15 ದಿನಗಳಲ್ಲಿ ಪರಿಸ್ಥಿತಿಯ ಪರಿಶೀಲನೆ ಕೈಗೊಳ್ಳಲಿದ್ದಾರೆ. ಯಾವುದೇ ಭಕ್ತರಿಗೆ ಸಮಸ್ಯೆಯಾಗದಂತಹ ರೀತಿಯಲ್ಲಿ ಕುಂಭಮೇಳವನ್ನು ಆಯೋಜಿಸುವ ಜವಾಬ್ಧಾರಿ ಸರಕಾರದ ಮೇಲಿದೆ ಎಂದು ಸಿಎಂ ತಿಳಿಸಿದರು. ಇನ್ನು ಕುಂಭಮೇಳದಲ್ಲಿ ನಿತ್ಯ 35ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆ ಇದೆ. ಕುಂಭಮೇಳಕ್ಕಾಗಿಯೇ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ಘಾಟ್‌ಗಳು , ಎಂಟು ಸೇತುವೆಗಳು ಹಾಗೂ ರಸ್ತೆಗಳ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಸ್ವಚ್ಛತೆಗೆ ವಿಶೇಷ ಕಾಳಜಿವಹಿಸಲಾಗುತ್ತಿದೆ. ಕುಡಿಯುವ ನೀರಿನ ಸೌಲಭ್ಯ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂಭಮೇಳದ ಅಧಿಕಾರಿ ದೀಪಕ್‌ ರಾವತ್‌ ಮಾಹಿತಿ ನೀಡಿದರು. ಬಹುತೇಕ ಕಾಮಗಾರಿಗಳು ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ ಎಂದು ದೀಪಕ್‌ ತಿಳಿಸಿದ್ದಾರೆ.


from India & World News in Kannada | VK Polls https://ift.tt/2UTsChb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...